ಭಾರತ ಸದಾ ಇಸ್ರೇಲ್ ಪರ ನಿಲ್ಲಲಿದೆ: ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ!

ಹಮಾಸ್ ಉಗ್ರರ ದಾಳಿಯ ನಂತರ ಗಾಜಾದ ಮೇಲೆ ಇಸ್ರೇಲಿ ಪಡೆಗಳ ಭೀಕರ ದಾಳಿಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದೇಶದ ಜನರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ

ನವದೆಹಲಿ: ಹಮಾಸ್ ಉಗ್ರರ ದಾಳಿಯ ನಂತರ ಗಾಜಾದ ಮೇಲೆ ಇಸ್ರೇಲಿ ಪಡೆಗಳ ಭೀಕರ ದಾಳಿಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದೇಶದ ಜನರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ನೆತನ್ಯಾಹು ಅವರ ದೂರವಾಣಿ ಕರೆಗಾಗಿ ಮತ್ತು ಅಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ವಿವರಿಸಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ. ಭಾರತವು ಭಯೋತ್ಪಾದಕತೆಯನ್ನು ಮತ್ತು ಅದರ ರೂಪಗಳನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಶನಿವಾರ, ಹಮಾಸ್‌ನ ಮಾರಣಾಂತಿಕ ರಾಕೆಟ್ ದಾಳಿಯ ಹಿನ್ನೆಲೆಯಲ್ಲಿ ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ತಮ್ಮ ಮತ್ತು ಭಾರತೀಯ ಪ್ರಜೆಗಳ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದಾಳಿಯಲ್ಲಿ ಮೃತಪಟ್ಟವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಇರುತ್ತದೆ. ಇಸ್ರೇಲ್‌ನಲ್ಲಿ ಉಗ್ರರ ದಾಳಿಯ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್  ಧನ್ಯವಾದ ಸಲ್ಲಿಸಿದ್ದರು. 

ಇತ್ತೀಚಿನ ವರದಿಗಳ ಪ್ರಕಾರ, ಹಮಾಸ್ ದಾಳಿಯಲ್ಲಿ ಇದುವರೆಗೆ ಕನಿಷ್ಠ 900 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ ಮತ್ತು 2,616 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com