ರಾಜಸ್ಥಾನ ವಿಧಾನಸಭೆ ಚುನಾವಣೆ: ದಿನಾಂಕ ಬದಲಾವಣೆ, ನವೆಂಬರ್ 25ಕ್ಕೆ ಮತದಾನ!
ನವದೆಹಲಿ: ಭಾರತೀಯ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನವೆಂಬರ್ 23 ರಿಂದ ನವೆಂಬರ್ 25 ಕ್ಕೆ ಬುಧವಾರ ಬದಲಾಯಿಸಿದೆ.
ನವೆಂಬರ್ 23 ರಂದು ಮದುವೆ, ಸಾಮಾಜಿಕ ನಿಶ್ಚಿತಾರ್ಥದಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಗುವುದರಿಂದ ಜನರಿಗೆ ಅನಾನುಕೂಲತೆ ಉಂಟಾಗಬಹುದು, ಚುನಾವಣೆ ವೇಳೆಯಲ್ಲಿ ಜನರು ಮತದಾನದಲ್ಲಿ ಭಾಗವಹಿಸದೆ ಮತದಾನ ಪ್ರಮಾಣ ಕಡಿಮೆಯಾಗಬಹುದೆಂದು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ಅಭಿಪ್ರಾಯ ಕೇಳಿಬಂದಿತ್ತು. ಇವುಗಳನ್ನು ಪರಿಗಣಿಸಿ ಚುನಾವಣಾ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಎಲ್ಲಾ ಅಂಶಗಳು ಮತ್ತು ಆದ್ಯತೆಗಳನ್ನು ಪರಿಗಣಿಸಿದ ಆಯೋಗವು, ನವೆಂಬರ್ 23, 2023 (ಗುರುವಾರ) ರಿಂದ ನವೆಂಬರ್ 25, 2023 (ಶನಿವಾರ) ಕ್ಕೆ ಮತದಾನದ ದಿನಾಂಕವನ್ನು ಬದಲಾಯಿಸಲು ನಿರ್ಧರಿಸಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.
ಚುನಾವಣಾ ಆಯೋಗವು ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿತ್ತು. ಈ ಹಿಂದೆ ರಾಜಸ್ಥಾನದಲ್ಲಿ ನವೆಂಬರ್ 23 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ