ಪ್ರಧಾನಿ ಮೋದಿ
ದೇಶ
ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಎಚ್.ಇ. ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರು ಸಾವಿಗೀಡಾಗಿದ್ದು, ಅದಕ್ಕೆ ನನ್ನ ಸಂತಾಪ ತಿಳಿಸಿದ್ದೇನೆ ಮತ್ತು ನಾವು ಪ್ಯಾಲೆಸ್ತೀನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.
ಭಯೋತ್ಪಾದನೆಯ ಆತಂಕದ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ