ಗುಜರಾತ್: ಗುಜರಾತಿನಲ್ಲಿ ನವರಾತ್ರಿ ಆಚರಣೆ ವೇಳೆಯಲ್ಲಿ ಕಳೆದೊಂದು ವಾರದಲ್ಲಿ ಸಾಂಪ್ರದಾಯಿಕ ಗರ್ಬಾ ನೃತ್ಯ ಮಾಡುತ್ತಿದ್ದ ಮಹಿಳೆ, ಹದಿಹರೆಯದ ವಿದ್ಯಾರ್ಥಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಇದು ರಾಜ್ಯಾದ್ಯಂತ ತುರ್ತು ಆರೋಗ್ಯ ಸೇವೆ ಹಾಗೂ ಕುಟುಂಬಸ್ಥರು ನೀಡಿರುವ ಮಾಹಿತಿ. ಆರು ಮಂದಿಯನ್ನು ಹೊರತುಪಡಿಸಿ ರಾಜ್ಯದಲ್ಲಿ ಇತರ 22 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಉನ್ನತ ಹೃದಯ ತಜ್ಞರು ಮತ್ತು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ನ ವೈದ್ಯರೊಂದಿಗೆ ಸಭೆ ನಡೆಸಿದ್ದು, ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು, ಡೇಟಾ ಸಂಗ್ರಹಿಸಲು ಮತ್ತು ಸಂಶೋಧನೆ ನಡೆಸಲು ಅವರಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶ ರಾಜ್ಯಪಾಲ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಭಾನುವಾರ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಅಧ್ಯಯನ ನಡೆಸುವಂತೆ ಆರೋಗ್ಯ ಸಚಿವರನ್ನು ಒತ್ತಾಯಿಸಿದ್ದಾರೆ.
ಭಾನುವಾರ ಪಟಾನ್ ಜಿಲ್ಲೆಯ ಸ್ಯಾಂಡರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಟೇಲ್, “ನವರಾತ್ರಿಯಲ್ಲಿ ಗರ್ಬಾ ಪ್ರದರ್ಶಿಸುವಾಗ ಅನೇಕ ಯುವಕರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು,ಕಾರಣ ಕಂಡುಹಿಡಿಯಲು ಅಧ್ಯಯನ ನಡೆಸಬೇಕೆಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರುಷಿಕೇಶಭಾಯ್ ಅವರನ್ನು ಒತ್ತಾಯಿಸಿದರು.
ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಡೆಸಿದ ಸಂಶೋಧನೆಯನ್ನು ಉಲ್ಲೇಖಿಸಿದ ಅವರು,, ಕೋವಿಡ್-19 ನಿಂದಾಗಿ ಇಂತಹ ಸಾವುಗಳು ಸಂಭವಿಸುತ್ತಿವೆ ಎಂಬ ಜನಪ್ರಿಯ ನಂಬಿಕೆಯನ್ನು ಅವರು ತಳ್ಳಿಹಾಕಿದರು.
Advertisement