ನ್ಯೂಸ್ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಯನ್ನು 9 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ 9 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಆರೋಪಿಗಳ 15 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಪೊಲೀಸರ ಮನವಿ ಪುರಸ್ಕರಿಸಿದ ದೆಹಲಿ ನ್ಯಾಯಾಲಯ, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2, 2023 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕ ಅಕ್ಟೋಬರ್ 3 ರಂದು ಬಂಧಿಸಿದ್ದು, ದೆಹಲಿಯಲ್ಲಿರುವ ನ್ಯೂಸ್ಕ್ಲಿಕ್ ಕಚೇರಿಯನ್ನು ಸೀಲ್ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪತ್ರಕರ್ತರನ್ನು ವಿಚಾರಣೆಗೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


