ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.
ಮುಂಬೈ ಪೊಲೀಸರ ಪ್ರಕಾರ, ಇಮೇಲ್‌ನಲ್ಲಿ 'ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಮ್ಮ ಬಳಿ ಭಾರತದ ಅತ್ಯುತ್ತಮ ಶೂಟರ್‌ಗಳು ಇದ್ದಾರೆ' ಎಂದು ಬರೆಯಲಾಗಿದೆ.
ಇಮೇಲ್ ಸ್ವೀಕರಿಸಿದ ನಂತರ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.
Advertisement