ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ರೈಲು ಅಪಘಾತ, 8 ಸಾವು, 32ಕ್ಕೂ ಹೆಚ್ಚು ಮಂದಿಗೆ ಗಾಯ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ