ಕೇರಳದಲ್ಲಿ ಅನುಮಾನಾಸ್ಪದ ಸ್ಫೋಟ, ಓರ್ವ ವ್ಯಕ್ತಿ ಬಲಿ, 20 ಮಂದಿಗೆ ಗಾಯ

ಕೇರಳದ ಸಭಾ ಭವನ ಒಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸ್ಥಳದಲ್ಲಿ ಜಮಾಯಿಸಿರುವ ಜನತೆ.
ಸ್ಥಳದಲ್ಲಿ ಜಮಾಯಿಸಿರುವ ಜನತೆ.

ಕೊಚ್ಚಿ: ಕೇರಳದ ಸಭಾ ಭವನ ಒಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 20 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ 20 ಮಂದಿಯ ಪೈಕಿ, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ಥಳದಲ್ಲಿ ಹಲವು ಬಾರಿ ಸ್ಫೋಟ ಸಂಭವಿಸಿದ್ದು, ಘಟನೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಸ್ಫೋಟಕದ ಕುರಿತು ನಿಖರ ಕಾರಣಗಳು ತಿಳಿದುಬಂದಿಲ್ಲ. ಘಟನೆ ಬಳಿಕ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದು, ಜನರನ್ನು ಚದುರಿಸುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com