ಕೇರಳ ಸ್ಫೋಟ: ಶಾಂತಿ ಕದಡಲು ಯತ್ನಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ವಪಕ್ಷ ಸಭೆಯಲ್ಲಿ ನಿರ್ಣಯ

ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಯು, ಸಮಾಜದಲ್ಲಿ ಅಪನಂಬಿಕೆ ಮತ್ತು ಅಸಹಿಷ್ಣುತೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ವಿರೋಧಿಸಲು ಸೋಮವಾರ ನಿರ್ಧರಿಸಿದೆ.
ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆ
ತಿರುವನಂತಪುರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆ
Updated on

ತಿರುವನಂತಪುರಂ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆದಿದ್ದ ಸರ್ವಪಕ್ಷ ಸಭೆಯು, ಸಮಾಜದಲ್ಲಿ ಅಪನಂಬಿಕೆ ಮತ್ತು ಅಸಹಿಷ್ಣುತೆಯನ್ನು ಸೃಷ್ಟಿಸುವ ಪ್ರಯತ್ನಗಳನ್ನು ವಿರೋಧಿಸಲು ಸೋಮವಾರ ನಿರ್ಧರಿಸಿದೆ.

ಸಚಿವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಸ್ಫೋಟದ ಹಿನ್ನೆಲೆಯಲ್ಲಿ ಜನರು ಆಧಾರರಹಿತ ಆರೋಪ, ಊಹಾಪೋಹ ಮತ್ತು ವದಂತಿಗಳಿಗೆ ಕಿವಿಕೊಡದಂತೆ ಒತ್ತಾಯಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಪ್ರಕಟಣೆ ಹೊರಡಿಸಿದೆ.

ಕ್ರೈಸ್ತ ಸಮುದಾಯವರು ಕಲಮಸ್ಸೇರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಭಾಗವಹಿಸಿದ್ದವು ಮತ್ತು ಶಾಂತಿ, ಭ್ರಾತೃತ್ವ ಮತ್ತು ಸಮಾನತೆಯಿಂದ ಕೂಡಿರುವ ಕೇರಳದ ವಿಶಿಷ್ಟ ಸಾಮಾಜಿಕ ಪರಿಸ್ಥಿತಿಗಳನ್ನು ಸಹಿಸಲಾಗದ ವ್ಯಕ್ತಿಗಳು ರಾಜ್ಯವನ್ನು ವಿಭಜಿಸಲು ಅಥವಾ ಶಾಂತಿಯನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿರುವ ಕೆಲವು ಸಮಾಜಘಾತುಕ ಶಕ್ತಿಗಳ ವಿರುದ್ಧ ಜಯಿಸಲು ಸರ್ವಪಕ್ಷ ಸಭೆಯಲ್ಲಿ ಸಾಮೂಹಿಕವಾಗಿ ನಿರ್ಣಯ ಕೈಗೊಳ್ಳಲಾಯಿತು ಎಂದು ಹೇಳಿಕೆ ತಿಳಿಸಿದೆ.

ಊಹಾಪೋಹಗಳು ಮತ್ತು ವದಂತಿಗಳನ್ನು ಹರಡಿ ಸಮಾಜದಲ್ಲಿ ಒಡಕುಗಳನ್ನು ಸೃಷ್ಟಿಸುವ ಮೂಲಕ ಜನರನ್ನು ವಿಭಜಿಸಲು ಪ್ರಯತ್ನಿಸುವವರ ಪ್ರಯತ್ನಗಳನ್ನು ವಿಫಲಗೊಳಿಸಲು ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೊಚ್ಚಿಯ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ರಾಜ್ಯ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಘಟನೆಯ ಕೆಲವು ಗಂಟೆಗಳ ನಂತರ, ರಾಜ್ಯದ ತ್ರಿಶ್ಶೂರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರ ಮುಂದೆ ಶರಣಾಗಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com