ರೈಲ್ವೆ ಇಲಾಖೆ ನಿದ್ರೆಯಿಂದ ಹೊರಬರುವುದು ಯಾವಾಗ? ಆಂಧ್ರ ರೈಲು ಅಪಘಾತದ ಬಗ್ಗೆ ಮಮತಾ ಬ್ಯಾನರ್ಜಿ ಕಿಡಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. 
ಮಮತಾ ಬ್ಯಾನರ್ಜಿ, ಅಶ್ವಿನಿ ವೈಷ್ಣವ್
ಮಮತಾ ಬ್ಯಾನರ್ಜಿ, ಅಶ್ವಿನಿ ವೈಷ್ಣವ್

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಮತ್ತೊಂದು ವಿನಾಶಕಾರಿ ರೈಲು ಅಪಘಾತ ಸಂಭವಿಸಿದೆ. ಈ ​​ಬಾರಿ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ಪ್ರಯಾಣಿಕ ರೈಲುಗಳ ನಡುವೆ ನಡೆದ ಡಿಕ್ಕಿಯಲ್ಲಿ ಇದುವರೆಗೆ ಕನಿಷ್ಠ 8 ಸಾವುಗಳು ಮತ್ತು ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ" ಎಂದು  ಪೋಸ್ಟ್ ಮಾಡಿದ್ದಾರೆ.

ರೈಲುಗಳ ನಡುವೆ ಮುಂಭಾಗದಲ್ಲಿ ಘರ್ಷಣೆಗಳು, ಬೋಗಿಗಳ ಹಳಿತಪ್ಪುವಿಕೆ, ಅಸಹಾಯಕ ಪ್ರಯಾಣಿಕರು ಬೋಗಿಗಳಲ್ಲಿ ಸಿಕ್ಕಿಹಾಕಿಕೊಂಡು ಬಲಿಯಾಗುತ್ತಿದ್ದಾರೆ: ಇದು ಅತ್ಯಂತ ದುರದೃಷ್ಟಕರ, ಮತ್ತೆ ಮತ್ತೆ ಮರುಕಳಿಸುತ್ತಿವೆ ಎಂದು ಅವರು ಹೇಳಿದ್ದಾರೆ. 

ಮೃತರ ಸಂಬಂಧಿಕರಿಗೆ ಸಂತಾಪ ಸೂಚಿಸಿರುವ ಮಮತಾ ಬ್ಯಾನರ್ಜಿ, ಘಟನೆ ಹಿನ್ನೆಲೆಯಲ್ಲಿ ಹೆಚ್ಚಿನ ತ್ವರಿತ ರಕ್ಷಣಾ ಕ್ರಮ ಕೈಗೊಳ್ಳಬೇಕು ಮತ್ತು ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ  ವಿಜಯನಗರ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಆಂಧ್ರ ರೈಲು ಡಿಕ್ಕಿಯಲ್ಲಿ ಸಾವಿನ ಸಂಖ್ಯೆ 13 ಕ್ಕೆ ತಲುಪಿದೆ ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com