ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ: ರಾಜ್ಯಪಾಲ ರವಿ ವಿರುದ್ಧ 'ಸುಪ್ರೀಂ' ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ರಾಜ್ಯ ಸರ್ಕಾರ ಕಳುಹಿಸಿದ ವಿಧೇಯಕಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ತಮಿಳುನಾಡು ರಾಜ್ಯಪಾಲ ಆರ್ ಎನ್.ರವಿ
ತಮಿಳುನಾಡು ರಾಜ್ಯಪಾಲ ಆರ್ ಎನ್.ರವಿ

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ರಾಜ್ಯ ಸರ್ಕಾರ ಕಳುಹಿಸಿದ ವಿಧೇಯಕಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ತಮಿಳುನಾಡು ವಿಧಾನಸಭೆ ಮತ್ತು ಸರ್ಕಾರ ಕಳುಹಿಸಿದ ಮಸೂದೆಗಳು ಮತ್ತು ಸರ್ಕಾರಿ ಆದೇಶಗಳನ್ನು ತೆರವುಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯಪಾಲರ ವಿರುದ್ಧ ಡಿಎಂಕೆ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

"ಈಗಿನ ರಿಟ್ ಅರ್ಜಿಯನ್ನು ಭಾರತ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗುತ್ತಿದ್ದು, ನಿಷ್ಕ್ರಿಯತೆ, ಲೋಪ, ವಿಳಂಬ ಮತ್ತು ತಮಿಳುನಾಡು ರಾಜ್ಯಪಾಲರು ಸಾಂವಿಧಾನಿಕ ಆದೇಶ ಅನುಸರಿಸಲು ವಿಫಲವಾಗಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿ ರಾಜ್ಯಪಾಲರ ಸಹಿ ಕಳುಹಿಸಿದ ಮಸೂದೆಗಳನ್ನುಮತ್ತು ನೀತಿಗಳನ್ನು ಪರಿಗಣಿಸದಿರುವುದು ಅಸಾಂವಿಧಾನಿಕ, ಕಾನೂನುಬಾಹಿರ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ರಿಟ್ ಅರ್ಜಿಯಲ್ಲಿ, ತಮಿಳುನಾಡು ಸರ್ಕಾರ, ಸಾಕಷ್ಟು ಸಮಯದಿಂದ ರಾಜ್ಯಪಾಲರ ಬಳಿ ಬಾಕಿ ಉಳಿದಿರುವ 12 ಮಸೂದೆಗಳನ್ನು ಪಟ್ಟಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com