ವಿಪಕ್ಷಗಳ ಮೈತ್ರಿ INDIA ಬಲದಿಂದ ಸರ್ಕಾರ ಆತಂಕಕ್ಕೆ ಒಳಗಾಗಿದೆ: ಮಲ್ಲಿಕಾರ್ಜುನ ಖರ್ಗೆ
ಪ್ರತಿಪಕ್ಷಗಳ ಮೈತ್ರಿಕೂಟದ ಬಲವು ಸರ್ಕಾರವನ್ನು ನಿರುತ್ಸಾಹಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಡಿ ಬರುವ ಸಂಸ್ಥೆಗಳ ಹೆಚ್ಚು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ INDIA ಮೈತ್ರಿಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಹೇಳಿದ್ದಾರೆ.
Published: 01st September 2023 02:08 PM | Last Updated: 01st September 2023 08:18 PM | A+A A-

ಮಲ್ಲಿಕಾರ್ಜುನ ಖರ್ಗೆ
ಮುಂಬೈ: ಪ್ರತಿಪಕ್ಷಗಳ ಮೈತ್ರಿಕೂಟದ ಬಲವು ಸರ್ಕಾರವನ್ನು ನಿರುತ್ಸಾಹಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಡಿ ಬರುವ ಸಂಸ್ಥೆಗಳ ಹೆಚ್ಚು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ INDIA ಮೈತ್ರಿಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಹೇಳಿದ್ದಾರೆ.
ಮುಂಬೈಯಲ್ಲಿಂದು ಪ್ರತಿಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಹರಡಿದ ಕೋಮುವಾದದ ವಿಷವು ಈಗ ಅಮಾಯಕ ರೈಲು ಪ್ರಯಾಣಿಕರ ಮೇಲೆ ಮತ್ತು ಶಾಲಾ ಮಕ್ಕಳ ಮೇಲಿನ ದ್ವೇಷದ ಅಪರಾಧಗಳಲ್ಲಿ ಕಂಡುಬರುತ್ತಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈಲ್ವೇ ಪೊಲೀಸ್ ಪೇದೆಯೊಬ್ಬರು ರೈಲಿನಲ್ಲಿದ್ದ ಜನರನ್ನು ಮಾರಣಾಂತಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆಗಳು ಮತ್ತು ಮುಜಫರ್‌ನಗರದ ಶಾಲೆಯ ಶಿಕ್ಷಕರೊಬ್ಬರು ತಮ್ಮ ಮನೆಕೆಲಸವನ್ನು ಪೂರ್ಣಗೊಳಿಸದಿದ್ದಕ್ಕಾಗಿ ಮುಸ್ಲಿಂ ಸಹಪಾಠಿಯನ್ನು ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದು ಇಂಥಹ ಘಟನೆಗಳು ಕೋಮುವಾದ ವಿಷಬೀಜ ಬಿತ್ತುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಇದನ್ನೂ ಓದಿ: ಒಳಜಗಳದಲ್ಲಿ ಒಳಗೇ ಬೆಂಕಿ ಇದೆ, ಇನ್ನು ಹೊರಗೇನು ತೋರಿಸೋದಿದೆ? ಬಿಜೆಪಿ ಲೇವಡಿ
ಪಾಟ್ನಾ ಮತ್ತು ಬೆಂಗಳೂರಿನಲ್ಲಿ ನಡೆದ ಎರಡೂ ಸಭೆಗಳ ಯಶಸ್ಸನ್ನು ಪ್ರಧಾನಿಯವರು ಕೇವಲ ಭಾರತದ ಮೇಲೆ ವಾಗ್ದಾಳಿ ನಡೆಸಲು ಬಳಸಿದ್ದು ಮಾತ್ರವಲ್ಲದೆ ನಮ್ಮ ಪ್ರೀತಿಯ ದೇಶದ ಹೆಸರನ್ನು ಭಯೋತ್ಪಾದಕರೊಂದಿಗೆ ಹೋಲಿಸಲು ಸಂಘಟನೆ ಮತ್ತು ಗುಲಾಮಗಿರಿಯ ಸಂಕೇತವಾಗಿ ಬಳಸಿಕೊಂಡಿದ್ದಾರೆ ಎಂದು ಟೀಕಿಸಿದರು.
ಈ ಸರ್ಕಾರದ ಸೇಡಿನ ರಾಜಕಾರಣದಿಂದಾಗಿ ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ದಾಳಿಗಳು ಮತ್ತು ಬಂಧನಗಳಿಗೆ ನಾವು ಸಿದ್ಧರಾಗಿರಬೇಕು, ನಮ್ಮ ಮೈತ್ರಿ ಇನ್ನಷ್ಟು ಬಲಿಷ್ಠವಾಗಬೇಕು. ಬಿಜೆಪಿ ಸರ್ಕಾರವು ನಮ್ಮ ನಾಯಕರ ವಿರುದ್ಧ ತನಿಖಾ ದಳಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ದೂರಿದರು.