1995 ಜೋಡಿ ಕೊಲೆ ಪ್ರಕರಣ: ಬಿಹಾರ ಮಾಜಿ ಸಂಸದ ಪ್ರಭುನಾಥ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ
1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
Published: 01st September 2023 12:54 PM | Last Updated: 01st September 2023 08:16 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: 1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಪ್ರಭುನಾಥ್ ಸಿಂಗ್ ಮಹಾರಾಜ್‌ಗಂಜ್ ಅನ್ನು ಜೆಡಿಯು ಮತ್ತು ಆರ್‌ಜೆಡಿ ಸಂಸದರಾಗಿ ಪ್ರತಿನಿಧಿಸಿದ್ದರು. ಮಹಾರಾಜ್‌ಗಂಜ್ ನಿಂದ ಹಲವು ಬಾರಿ ಆರಿಸಿ ಬಂದಿದ್ದರು. ಜೋಡಿ ಕೊಲೆ ಪ್ರಕರಣದಲ್ಲಿ ಪ್ರಭುನಾಥ್ ಸಿಂಗ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯ ಮತ್ತು ಪಾಟ್ನಾ ಹೈಕೋರ್ಟ್‌ನ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಆಗಸ್ಟ್ 18 ರಂದು ರದ್ದುಗೊಳಿಸಿತ್ತು.
ಇದನ್ನೂ ಓದಿ: ರೈಲ್ವೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಂಡಳಿಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಜಯಾ ವರ್ಮಾ ಸಿನ್ಹಾ ನೇಮಕ!
ವಿಚಾರಣಾ ನ್ಯಾಯಾಲಯ ಮತ್ತು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಆಗಸ್ಟ್ 18ರಂದು ರದ್ದು ಮಾಡಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ, ವಿಕ್ರಮ್ ನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ, ಪ್ರಭುನಾಥ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣದ ಮೇಲಿನ ವಾದಗಳನ್ನು ಆಲಿಸಿದ ಪೀಠವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನುವಿಧಿಸಿತು.
ಮಾರ್ಚ್ 1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ: ಕಾಂಗ್ರೆಸ್ ಜೊತೆಗೆ ವೈಎಸ್‌ಆರ್‌ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!
ಬಿಹಾರದ ಮಹಾರಾಜ್ ಗಂಜ್‌ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡುವ ಸಂದರ್ಭ ಸುಪ್ರೀಂ ಕೋರ್ಟ್, ಸಿಂಗ್ ಅವರು ತಮ್ಮ ವಿರುದ್ಧದ ಸಾಕ್ಷ್ಯ ನಾಶ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದೆ.