ಐಐಟಿ ದೆಹಲಿ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣಿಗೆ ಶರಣು
ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿ ಶುಕ್ರವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 02nd September 2023 01:22 AM | Last Updated: 02nd September 2023 01:22 AM | A+A A-

IIT Delhi
ನವದೆಹಲಿ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿ ಶುಕ್ರವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿ ಬಿಟೆಕ್ ಮಾಡುತ್ತಿದ್ದ 21 ವರ್ಷದ ಅನಿಲ್ ಕುಮಾರ್, ಐಐಟಿಯ ವಿಂಧ್ಯಾಚಲ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ: ಐಐಟಿ-ಜೆಇಇ ಆಕಾಂಕ್ಷಿ ನೇಣಿಗೆ ಶರಣು; ಕೋಟಾದಲ್ಲಿ 15 ದಿನದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ
ಸಂಜೆ 6 ಗಂಟೆ ಸುಮಾರಿಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
ಸಂಸ್ಥೆಯ ನಿಯಮಗಳ ಪ್ರಕಾರ, ಕುಮಾರ್ ಅವರು ಜೂನ್‌ನಲ್ಲಿ ಹಾಸ್ಟೆಲ್ ಕೊಠಡಿಯನ್ನು ಖಾಲಿ ಮಾಡಬೇಕಾಗಿತ್ತು. ಆದರೆ ಕುಮಾರ್ ಕೆಲವು ವಿಷಯಗಳಲ್ಲಿ ಅರ್ಹತೆ ಪಡೆಯಲು ಸಾಧ್ಯವಾಗದ ಕಾರಣ ಆ ವಿಷಯಗಳಲ್ಲಿ ತೇರ್ಗಡೆಯಾಗಲು ಆರು ತಿಂಗಳವರೆಗೆ ಹಾಸ್ಟೆಲ್ ನಲ್ಲಿ ತಂಗಲು ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.
ಇಲ್ಲಿಯವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.