'ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ; ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು': ಕೇಜ್ರಿವಾಲ್
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ.
Published: 03rd September 2023 08:50 PM | Last Updated: 04th September 2023 05:00 PM | A+A A-

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಭಿವಾನಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಮಗೆ ಒಂದು ರಾಷ್ಟ್ರ, ಒಂದು ಚುನಾವಣೆ ಬೇಡ, ಒಂದು ರಾಷ್ಟ್ರ, ಒಂದು ಶಿಕ್ಷಣ ಬೇಕು ಎಂದಿದ್ದಾರೆ.
ಹರಿಯಾಣದ ಭಿವಾನಿಯಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಇದೀಗ ಒಂದು ರಾಷ್ಟ್ರ ಒಂದು ಚುನಾವಣೆ ಗಿಮ್ಮಿಕ್ ನೊಂದಿಗೆ ಬಂದಿದೆ. ಒಂದು ಅಥವಾ 10, 12 ಚುನಾವಣೆಗಳಿಂದ ನಮಗೆ ಏನು ಸಿಗುತ್ತದೆ. ನಮಗೆ 'ಒಂದು ರಾಷ್ಟ್ರ, ಒಂದು ಶಿಕ್ಷಣ' ಬೇಕು. ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ಸಿಗಬೇಕು. ನಮಗೆ 'ಒಂದು ರಾಷ್ಟ್ರ, ಒಂದು ಚುನಾವಣೆ' ಬೇಡ. ಒಂದು ಚುನಾವಣೆ ಅಥವಾ 1000 ಚುನಾವಣೆಗಳು ನಮಗೆ ಮುಖ್ಯವಲ್ಲ ಎಂದರು.
ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ: ಇವಿಎಂಗಳಿಗೆ ತಗುಲುವ ಖರ್ಚು ಎಷ್ಟು ಗೊತ್ತೇ?: ಆಯೋಗದ ಅಂದಾಜು ಹೀಗಿದೆ...
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ ದೆಹಲಿ ಸಿಎಂ, ಇಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ಏನು ಸಿಗುತ್ತದೆ ಎಂದು ಕುತೂಹಲ ವ್ಯಕ್ತಪಡಿಸಿದರು. "ದೇಶಕ್ಕೆ ಯಾವುದು ಮುಖ್ಯ? ಎಂದು ಪ್ರಶ್ನಿಸಿದ ಅವರು, ಒಂದು ರಾಷ್ಟ್ರ ಒಂದು ಚುನಾವಣೆ ಅಥವಾ ಒಂದು ರಾಷ್ಟ್ರ ಒಂದು ಶಿಕ್ಷಣ (ಶ್ರೀಮಂತ ಅಥವಾ ಬಡವರು ಎಲ್ಲರಿಗೂ ಸಮಾನವಾದ ಉತ್ತಮ ಶಿಕ್ಷಣ) ಒಂದು ರಾಷ್ಟ್ರ ಒಂದು ಟ್ವೀಟ್ ಮೆಂಟ್ ( ಶ್ರೀಮಂತ ಅಥವಾ ಬಡವ ಎಲ್ಲರಿಗೂ ಸಮಾನ ಗೌರವ) ಒಂದು ರಾಷ್ಟ್ರ ಒಂದು ಚುನಾವಣೆಯಿಂದ ಸಾಮಾನ್ಯ ಜನರು ಏನು ಪಡೆಯಲಿದ್ದಾರೆ ಎಂದು ಪ್ರಶ್ನಿಸಿದರು.
#WATCH | Bhiwani, Haryana: On 'One Nation, One Election', Delhi CM Arvind Kejriwal says, "The BJP has come up with a new gimmick 'One Nation, One Election'. What will we get from one election or 10 elections or 12 elections... We want 'One Nation, One Education'. Everyone should… pic.twitter.com/6cho3Lkjqh
— ANI (@ANI) September 3, 2023
ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ಕಾರ್ಯ ಸಾಧ್ಯತೆ ಕುರಿತು ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ಅದರ ಪರ ಹಾಗೂ ವಿರುದ್ಧ ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಆಡಳಿತರೂಢ ಬಿಜೆಪಿ ಬೆಂಬಲಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದರೆ, ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.