ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್
ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್

'ರಾಜಭವನ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ': ಪಶ್ಚಿಮ ಬಂಗಾಳ ಶಿಕ್ಷಣ ಸಚಿವ

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯದ ಏಳು ವಿಶ್ವವಿದ್ಯಾನಿಲಯಗಳ ಹಂಗಾಮಿ ಉಪಕುಲಪತಿಗಳ ನೇಮಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು...
Published on

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ರಾಜ್ಯದ ಏಳು ವಿಶ್ವವಿದ್ಯಾನಿಲಯಗಳ ಹಂಗಾಮಿ ಉಪಕುಲಪತಿಗಳ ನೇಮಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು, ರಾಜಭವನ "ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಸೋಮವಾರ ಆರೋಪಿಸಿದ್ದಾರೆ ಮತ್ತು ಈ ಕ್ರಮ ವಿಶ್ವವಿದ್ಯಾಲಯಗಳ ವ್ಯವಸ್ಥೆಯನ್ನು "ನಾಶ" ಮಾಡಬಹುದು ಎಂದು ಹೇಳಿದ್ದಾರೆ.

ರಾಜ್ಯಪಾಲರ ಈ ಕ್ರಮವು, ವಿವಿಗಳ ಕುಲಾಧಿಪತಿಯಾಗಿ ರಾಜ್ಯಪಾಲರ ಪಾತ್ರ ಮತ್ತು ಕಾರ್ಯಗಳಿಗೆ ಸಂಬಂಧಿಸಿದಂತೆ "ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಯನ್ನು ಉಲ್ಲಂಘಿಸಿದೆ" ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯ, MAKAUT ಮತ್ತು ಬುರ್ದ್ವಾನ್ ವಿಶ್ವವಿದ್ಯಾಲಯ ಸೇರಿದಂತೆ ಏಳು ವಿವಿಗಳಿಗೆ ಹಂಗಾಮಿ ಉಪಕುಲಪತಿಗಳನ್ನು ರಾಜ್ಯಪಾಲರು ಭಾನುವಾರ ರಾತ್ರಿ ನೇಮಿಸಿದ್ದಾರೆ.

"ರಾಜ್ಯಪಾಲರ ಈ ಕ್ರಮವು ಉನ್ನತ ಶಿಕ್ಷಣ ವ್ಯವಸ್ಥೆಯನ್ನು ದಿವಾಳಿ ಮಾಡುವ ಗುರಿ ಹೊಂದಿದೆ. ಅವರು ಆಯಾ ರಾಜ್ಯದ ವಿಶ್ವವಿದ್ಯಾಲಯಗಳ ನಿಯಮಗಳನ್ನು ನಾಶಪಡಿಸುತ್ತಿದ್ದಾರೆ. ಯಾರನ್ನೂ ಸಂಪರ್ಕಿಸದೆ ಇಂತಹ ನೇಮಕಾತಿಗಳನ್ನು ಮಾಡಲಾಗಿದೆ. ಅವರು ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ" ಎಂದು ಬಸು ಅವರು ಪತ್ರಿಕಾಗೋಷ್ಠಿಯಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com