ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ. ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಹೇಳಿದ್ದಾರೆ.

ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನನ್ನು ತಟಸ್ಥಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com