"ಸನಾತನ ಧರ್ಮ ನಿರ್ಮೂಲನೆ" ಹೇಳಿಕೆ: ಉದಯನಿಧಿ ವಿರುದ್ಧ ಕೇಸ್ ದಾಖಲಿಸುವಂತೆ ಸಿಜೆಐಗೆ 262 ಗಣ್ಯರಿಂದ ಪತ್ರ

"ಸನಾತನ ಧರ್ಮ ನಿರ್ಮೂಲನೆ"ಗೆ ಕರೆ ನೀಡಿದ್ದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ತಮಿಳುನಾಡು ಯುವಜನ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ...
ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್

ನವದೆಹಲಿ: "ಸನಾತನ ಧರ್ಮ ನಿರ್ಮೂಲನೆ"ಗೆ ಕರೆ ನೀಡಿದ್ದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ತಮಿಳುನಾಡು ಯುವಜನ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಸ್ ಎನ್ ಧಿಂಗ್ರಾ ಸೇರಿದಂತೆ 262 ಗಣ್ಯರು ಸಿಜೆಐಗೆ ಬರೆದ ಪತ್ರದಲ್ಲಿ ಸಹಿ ಮಾಡಿದ್ದು, ಉದಯನಿಧಿ ಸ್ಟಾಲಿನ್ ದ್ವೇಷಪೂರಿತ ಭಾಷಣ ಮಾಡಿದ್ದು ಮಾತ್ರವಲ್ಲದೆ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಸ್ಟಾಲಿನ್ ಹೇಳಿಕೆ ಬಗ್ಗೆ ಕೆಳಗೆ ಸಹಿ ಮಾಡಲಾದವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ಹೇಳಿಕೆಗಳು ನಿರ್ವಿವಾದವಾಗಿ ಭಾರತದ ಹೆಚ್ಚಿನ ಜನಸಂಖ್ಯೆಯ ವಿರುದ್ಧ "ದ್ವೇಷ ಭಾಷಣ" ಕ್ಕೆ ಸಮನಾಗಿರುತ್ತದೆ. ಹೀಗಾಗಿ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ದೇಶದ ಜಾತ್ಯತೀತ ಗುಣವನ್ನು ಕಾಪಾಡುವ ನಿಟ್ಟಿನಲ್ಲಿ ಉದಯನಿಧಿ ವಿರುದ್ಧ ಕ್ರಮ ಅಗತ್ಯ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ತಮಿಳುನಾಡು ಸರ್ಕಾರ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರಾಕರಿಸಿದೆ ಮತ್ತು ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸಿದೆ ಮತ್ತು "ಗಂಭೀರವಾಗಿ ದುರ್ಬಲಗೊಳಿಸಿದೆ ಅಥವಾ ಕಾನೂನಿನ ನಿಯಮವನ್ನು ಅಪಹಾಸ್ಯ ಮಾಡಿದೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕಳೆದ ಭಾನುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರು ಸನಾತನ ಧರ್ಮವನ್ನು ಕೊರೋನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದಾರೆ ಮತ್ತು ಅಂತಹ ವಿಷಯಗಳನ್ನು ವಿರೋಧಿಸಬಾರದು. ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com