ಜಿ20 ಆಹ್ವಾನ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್': ರಾಜ್ಯಗಳ ಒಕ್ಕೂಟ ಮೇಲೆ ಆಕ್ರಮಣ ಎಂದ ಕಾಂಗ್ರೆಸ್

ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಟ್ವಿಟರ್‌ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಜಿ20 ಆಮಂತ್ರಣ ಪತ್ರಿಕೆಯಲ್ಲಿ ಸೆಪ್ಟೆಂಬರ್ 9 ರಂದು ಜಿ20 ಪ್ರತಿನಿಧಿಗಳಿಗೆ ಭೋಜನ ಕೂಟವನ್ನು ಭಾರತ್ ನ ರಾಷ್ಟ್ರಪತಿಗಳು ಆಯೋಜಿಸುತ್ತಾರೆ ಎಂದು ಫೋಟೋಗಳು ತೋರಿಸುತ್ತವೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ದೇಶದ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ನನಗೆ ಸಂತೋಷ ಮತ್ತು ಹೆಮ್ಮೆಯಿದೆ ಎಂದು ಟ್ವೀಟ್ ಮಾಡಿ, ಗಣರಾಜ್ಯ ಭಾರತ- ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆಯಿದೆ ಎಂದು ಬರೆದುಕೊಂಡಿದ್ದಾರೆ. 

ಬಿಜೆಪಿ ರಾಜ್ಯಸಭಾ ಸಂಸದ ಹರನಾಥ್ ಸಿಂಗ್ ಯಾದವ್ ಕೂಡ 'ಇಂಡಿಯಾ' ಬದಲಿಗೆ 'ಭಾರತ' ಪದವನ್ನು ಬಳಸಬೇಕೆಂದು ಇಡೀ ದೇಶ ಒತ್ತಾಯಿಸುತ್ತಿದೆ ಎಂದು ಹೇಳಿದ್ದಾರೆ. ಇಂಡಿಯಾ ಎಂಬ ಪದವು ಬ್ರಿಟಿಷರು ನಮಗೆ ನೀಡಿದ ನಿಂದನೆಯಾಗಿದೆ ಆದರೆ 'ಭಾರತ್' ಎಂಬ ಪದವು ನಮ್ಮ ಸಂಸ್ಕೃತಿಯ ಸಂಕೇತವಾಗಿದೆ. ನಮ್ಮ ಸಂವಿಧಾನದಲ್ಲಿ ಬದಲಾವಣೆಯಾಗಬೇಕು. ಅದಕ್ಕೆ ‘ಭಾರತ್’ ಎಂಬ ಪದವನ್ನು ಸೇರಿಸಬೇಕು ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com