ಸಂಸತ್ತು ವಿಶೇಷ ಅಧಿವೇಶನ: ಆರು ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. 
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. 

ಆರು ಬೇಡಿಕೆಗಳು:

  1. ಪ್ರಸ್ತುತ ಆರ್ಥಿಕ ಪರಿಸ್ಥಿತಿಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಅಸಮಾನತೆಗಳ ಹೆಚ್ಚಳ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ(MSME)ಗಳ ಮೇಲೆ ಕೇಂದ್ರೀಕರಿಸಿದ್ದು ಇವುಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕು. 
  2. ಕನಿಷ್ಠ ಬೆಂಬಲ ಬೆಲೆ (MSP) ಮತ್ತು ರೈತರು ಮತ್ತು ರೈತ ಸಂಘಟನೆಗಳು ಎತ್ತಿದ ಇತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ಬದ್ಧತೆ
  3. ಉದ್ಯಮಿ ಅದಾನಿ ವ್ಯಾಪಾರ ಸಮೂಹದ ವಹಿವಾಟುಗಳನ್ನು ತನಿಖೆ ಮಾಡಲು ಜಂಟಿ ಸದನ ಸಮಿತಿ(JPC) ಬೇಡಿಕೆ.
  4. ಮಣಿಪುರದ ಜನರು ಎದುರಿಸುತ್ತಿರುವ ನಿರಂತರ ಸಂಕಟ ಮತ್ತು ರಾಜ್ಯದಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಸಾಮಾಜಿಕ ಸಾಮರಸ್ಯದ ಕುಸಿತದ ಬಗ್ಗೆ ಚರ್ಚೆಯಾಗಬೇಕು. 
  5. ಹರಿಯಾಣದಂತಹ ವಿವಿಧ ರಾಜ್ಯಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚಳ
  6. ಚೀನಾದಿಂದ ಭಾರತೀಯ ಭೂಪ್ರದೇಶದ ಮೇಲೆ ನಿರಂತರ ಆಕ್ರಮಣವಾಗುತ್ತಿದ್ದು, ಲಡಾಖ್ ಮತ್ತು ಅರುಣಾಚಲ ಪ್ರದೇಶದ ನಮ್ಮ ಗಡಿಗಳಲ್ಲಿ ನಮ್ಮ ಸಾರ್ವಭೌಮತೆಗೆ ಸವಾಲುಗಳು ಎದುರಾಗುತ್ತಿವೆ, ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರದ ನಿಲುವೇನು?

ಬೇರೆ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ. ರಚನಾತ್ಮಕ ಸಹಕಾರದ ಉತ್ಸಾಹದಲ್ಲಿ, ಮುಂಬರುವ ವಿಶೇಷ ಅಧಿವೇಶನದಲ್ಲಿ ಈ ವಿಷಯಗಳನ್ನು ತೆಗೆದುಕೊಳ್ಳಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ ಎಂದು ಹೇಳಿದ್ದಾರೆ. 

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸದನದ ವ್ಯವಹಾರದಲ್ಲಿ ಯಾವುದೇ ಅಜೆಂಡಾವನ್ನು ಚರ್ಚಿಸದೆ ಅಥವಾ ಪಟ್ಟಿ ಮಾಡದಿರುವುದು ಇದೇ ಮೊದಲು. ಮುಂಬರುವ ಅಧಿವೇಶನವು ರಚನಾತ್ಮಕವಾಗಿರಬೇಕೆಂದು ನಾವು ಬಯಸುತ್ತೇವೆ. ಇದನ್ನು ಕಾರ್ಯತಂತ್ರದ ಗುಂಪಿನ ಸಭೆಯಲ್ಲಿ ಮತ್ತು ಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ಸಂಸತ್ತಿನ ವಿಶೇಷ ಅಧಿವೇಶನ ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com