ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯ
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೆಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 45 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...
Published: 08th September 2023 05:14 PM | Last Updated: 08th September 2023 08:54 PM | A+A A-

ಮಣಿಪುರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ.
ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೆಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 45 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ವರು ನಾಗರಿಕರಿಗೆ ಬುಲೆಟ್ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪಲ್ಲೆಲ್‌ನಲ್ಲಿ ಅಪರಿಚಿತ ಪುರುಷರ ಎರಡು ಗುಂಪುಗಳ ನಡುವೆ ಗುಂಡಿನ ದಾಳಿ ಪ್ರಾರಂಭವಾಯಿತು. ಈ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(RIMS) ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನು ಓದಿ: ಮಣಿಪುರ ಹಿಂಸಾಚಾರ: ಭಾರತೀಯ ಸಂಪಾದಕರ ಸಂಘದ ವಿರುದ್ಧ ಎಫ್ ಐಆರ್ ದಾಖಲು
ಗುಂಡಿನ ಸುದ್ದಿ ಹರಡುತ್ತಿದ್ದಂತೆ, ತೌಬಲ್ ಮತ್ತು ಕಾಕ್ಚಿಂಗ್ ಜಿಲ್ಲೆಗಳ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಜನ ಪಲ್ಲೆಲ್‌ಗೆ ಧಾವಿಸಿದರು. ಆದರೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಅವರನ್ನು ತಡೆದರು, ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಲ್ಲೆಲ್ ನಲ್ಲಿ ಅಪರಿಚಿತ ಶಸ್ತ್ರಧಾರಿಗಳ ಎರಡು ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ಶಾಂತಗೊಳಿಸಲು ಅಸ್ಸಾಂ ರೈಫಲ್ಸ್ ಅಶ್ರುವಾಯು ಪ್ರಯೋಗಿಸಿದ ಪರಿಣಾಮ 45 ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಗುಂಡಿನ ದಾಳಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.