ಉಪಚುನಾವಣೆ ಫಲಿತಾಂಶ: ಬಿಜೆಪಿಗೆ 3 ಸ್ಥಾನ, ನಾಲ್ಕು ಸ್ಥಾನಗಳಲ್ಲಿ ಗೆದ್ದು ಬೀಗಿದ ಪ್ರತಿಪಕ್ಷಗಳು

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಾಲ್ಕು ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.
ವಿರೋಧ ಪಕ್ಷಗಳ ನಾಯಕರ ಸಭೆ
ವಿರೋಧ ಪಕ್ಷಗಳ ನಾಯಕರ ಸಭೆ

ಲಖನೌ/ಅಗರ್ತಲಾ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಾಲ್ಕು ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.

ಕೇಸರಿ ಪಕ್ಷ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್, ಜೆಎಂಎಂ, ಟಿಎಂಸಿಗೆ ಮತ್ತು ಸಮಾಜವಾದಿ ಪಕ್ಷ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿವೆ.

ಬಿಜೆಪಿಯು ಉತ್ತರಾಖಂಡದ ಬಾಗೇಶ್ವರ್ ವಿಧಾನಸಭಾ ಕ್ಷೇತ್ರ ಮತ್ತು ತ್ರಿಪುರಾದ ಧನ್‌ಪುರವನ್ನು ಉಳಿಸಿಕೊಂಡಿದೆ ಮತ್ತು ಈಶಾನ್ಯ ರಾಜ್ಯದಲ್ಲಿ ಸಿಪಿಐ(ಎಂ) ನಿಂದ ಬೊಕ್ಸಾನಗರ ವಿಧಾನಸಭಾ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. 

ಇನ್ನು ಉತ್ತರ ಪ್ರದೇಶದ ಘೋಸಿಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಸುಧಾಕರ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ದಾರಾ ಸಿಂಗ್ ಚೌಹಾಣ್ ವಿರುದ್ಧ ಸುಮಾರು 40 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ದಾರಾ ಸಿಂಗ್ ಚೌಹಾಣ್ ಅವರು ಎಸ್‌ಪಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಸುಧಾಕರ್ ಸಿಂಗ್ ಅವರು 1,24,427 ಮತಗಳನ್ನು ಗಳಿಸಿದರೆ, ಅವರ ಪ್ರತಿಸ್ಪರ್ಧಿ ಚೌಹಾಣ್ 81,668 ಮತಗಳನ್ನು ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, "ಇದು ಸಕಾರಾತ್ಮಕ ರಾಜಕೀಯದ ಗೆಲುವು ಮತ್ತು ನಕಾರಾತ್ಮಕ ಕೋಮುವಾದಿ ರಾಜಕೀಯದ ಸೋಲು. ಇದು ಇಂಡಿಯಾದ ವಿಜಯ ಯಾತ್ರೆಯ ಆರಂಭ" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com