ರಾಷ್ಟ್ರಪತಿಗಳ ಜಿ20 ಔತಣಕೂಟ: ಸಿಎಂ ಸಿದ್ದರಾಮಯ್ಯ ಸೇರಿ ಪ್ರತಿಪಕ್ಷಗಳ ಕೆಲ ಸಿಎಂಗಳು ಗೈರು

ಮೊದಲ ಬಾರಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಔತಣಕೂಟ ಆಯೋಜಿಸಿದ್ದು, ಇದಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ನವದೆಹಲಿ: ಮೊದಲ ಬಾರಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಔತಣಕೂಟ ಆಯೋಜಿಸಿದ್ದು, ಇದಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ ಡಿ ದೇವೇಗೌಡ ಅವರು ಸೇರಿದಂತೆ ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮನಮೋಹನ್ ಸಿಂಗ್ ಮತ್ತು ದೇವೇಗೌಡ ಇಬ್ಬರೂ ಆರೋಗ್ಯದ ಕಾರಣಗಳಿಂದ ರಾಷ್ಟ್ರಪತಿಗಳ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಔತಣಕೂಟದಲ್ಲಿ ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸೆಪ್ಟೆಂಬರ್ 9 ರಂದು ರಾಷ್ಟ್ರಪತಿಯವರ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳಬಹುದು ಎಂಬ ವರದಿಗಳೂ ತಿಳಿಸಿವೆ.

ಏತನ್ಮಧ್ಯೆ, ಕೇಂದ್ರ ಸಚಿವ ಸ್ಥಾನಕ್ಕೆ ಸಮಾನವಾದ ಮತ್ತು ಸಾಂವಿಧಾನಿಕ ಸ್ಥಾನ ಹೊಂದಿರುವ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಔತಣಕೂಟಕ್ಕೆ ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಹೀಗಾಗಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಜಿ20 ಔತಣಕೂಟಕ್ಕೆ ಹಾಜರಾಗುವ ಸಾಧ್ಯತೆ ಇಲ್ಲ.

ಔತಣಕೂಟದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭಾಗವಹಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರಪತಿಗಳ ಜಿ20 ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com