ನಾನು ಯಾವುದೇ ಅವ್ಯವಹಾರ, ಭ್ರಷ್ಟಾಚಾರ ನಡೆಸಿಲ್ಲ; ಸೂಕ್ತ ಮಾಹಿತಿಯಿಲ್ಲದೆ ಸಿಐಡಿ ನನ್ನನ್ನು ಬಂಧಿಸಿದೆ: ಚಂದ್ರಬಾಬು ನಾಯ್ಡು

ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ಮಾಡಿಲ್ಲ. ಸೂಕ್ತ ಮಾಹಿತಿಗಳಿಲ್ಲದೆಯೇ ಸಿಐಡಿ ಅಧಿಕಾರಿಗಳು ನನ್ನನ್ನು ಬಂಧನಕ್ಕೊಳಪಡಿಸಿದ್ದಾರೆಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಶನಿವಾರ ಹೇಳಿದ್ದಾರೆ.
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ಕರ್ನೂಲ್: ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ಮಾಡಿಲ್ಲ. ಸೂಕ್ತ ಮಾಹಿತಿಗಳಿಲ್ಲದೆಯೇ ಸಿಐಡಿ ಅಧಿಕಾರಿಗಳು ನನ್ನನ್ನು ಬಂಧನಕ್ಕೊಳಪಡಿಸಿದ್ದಾರೆಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಶನಿವಾರ ಹೇಳಿದ್ದಾರೆ.

ವಿಜಯವಾಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜನರ ಸಮಸ್ಯೆ ಬಗೆಹರಿಸಲು ಹೋರಾಟ ನಡೆಸುತ್ತಿದ್ದೇನೆ. ನನ್ನ ಧ್ವನಿಯನ್ನು ಹತ್ತಿಕ್ಕಲು ಬಂಧನಕ್ಕೊಳಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಬಂಧನ ವಿಚಾರವಾಗಿ ಸಿಐಡಿ ಅಧಿಕಾರಿಗಳು ಯಾವುದೇ ಮಾಹಿತಿಗಳನ್ನು ನೀಡುತ್ತಿಲ್ಲ. ಯಾವ ಕಾರಣಕ್ಕೆ ನನ್ನನ್ನು ಬಂಧಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ, ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ. ನಾನು ಮುಗ್ಧ. ಯಾವುದೇ ಭ್ರಷ್ಟಾಚಾರವಾಗಲೀ, ಅವ್ಯವಹಾರವಾಗಲೀ ನಡೆಸಿಲ್ಲ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಅಧಿಕಾರಿಗಳು ಸಮರ್ಥಿಸಿಕೊಳ್ಳಲು ಅವರ ಬಳಿ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ.

ಸ್ಕಿಲ್​ ಡೆವಲಪ್​​ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಇಂದು ಬಂಧನಕ್ಕೊಳಪಡಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರನ್ನು ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409, 201, 34 & 37 ಹಾಗೂ ಭ್ರಷ್ಟಾಚಾರ ತಡೆ ಕಾಯಿದೆ, 1988 ಇತರ ವಿಭಾಗಗಳಡಿ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com