ಭೂಕಂಪ ಪೀಡಿತ ಮೊರಾಕ್ಕೊಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ
ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
Published: 09th September 2023 02:41 PM | Last Updated: 09th September 2023 03:07 PM | A+A A-

ಪ್ರಧಾನಿ ಮೋದಿ
ನವದೆಹಲಿ: ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಡ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ‘ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಿಂದ ಹಲವರು ಪ್ರಾಣ ಕಳೆದುಕೊಂಡಿದ್ದು, ಇದರಿಂತ ತೀವ್ರ ನೋವಾಗಿದೆ. ನನ್ನ ಆಲೋಚನೆಗಳು ಮೊರೊಕ್ಕೊ ಜನರೊಂದಿಗೆ ಇವೆ. ಇಂತಹ ಕಷ್ಟದ ಸಂದರ್ಭದಲ್ಲಿ ಮೊರಾಕ್ಕೊಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.
Extremely pained by the loss of lives due to an earthquake in Morocco. In this tragic hour, my thoughts are with the people of Morocco. Condolences to those who have lost their loved ones. May the injured recover at the earliest. India is ready to offer all possible assistance to…
— Narendra Modi (@narendramodi) September 9, 2023
ಮಧ್ಯ ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ: ಸಾವಿನ ಸಂಖ್ಯೆ 600ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯ
ಮೊರಾಕ್ಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಕೇಂದ್ರಬಿಂದುವು ಹೈ ಅಟ್ಲಾಸ್ ಪರ್ವತಗಳಲ್ಲಿ, 71 ಕಿಮೀ (44 ಮೈಲುಗಳು) ನೈಋತ್ಯ ಮರ್ರಾಕೇಶ್‌ನಲ್ಲಿ, 18.5 ಕಿಮೀ ಆಳದಲ್ಲಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಸ್ಥಳೀಯ ಕಾಲಮಾನ 23:11ಕ್ಕೆ (22:11 GMT) ಭೂಕಂಪ ಸಂಭವಿಸಿದ್ದು, 19 ನಿಮಿಷಗಳ ನಂತರ ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆಯ ಮತ್ತೊಂದು ಭೂ ಕಂಪನ ಸಂಭವಿಸಿದೆ. ಮರಾಕೇಶ್ ಮತ್ತು ದಕ್ಷಿಣದ ಹಲವಾರು ಪ್ರದೇಶಗಳಲ್ಲಿ ಅನೇಕ ಜನರು ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.