ವಿಮಾನದಲ್ಲಿ ತಾಂತ್ರಿಕ ದೋಷ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ದೆಹಲಿಯಲ್ಲೇ ವಾಸ

2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ.
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ
Updated on

ನವದೆಹಲಿ: 2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ.

ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಕಾರಣದಿಂದ ಇಂದು ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. 

‘ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಪ್ರಯಾಣಿಸಬೇಕಿದ್ದ CFC001 ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಯಿಂದ ತಿಳಿದುಬಂದಿತು. ವಿಮಾನದಲ್ಲಿನ ದೋಷವನ್ನು ರಾತ್ರಿಯೇ ಸರಿಪಡಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಇರುತ್ತದೆ’ ಎಂದು ಕೆನಡಾ ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ.

ಜಸ್ಟಿನ್ ಟ್ರುಡೊ, ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದರು. ಜಿ20 ಶೃಂಗಸಭೆ ನಡುವೆಯೇ ಟ್ರುಡೋ ಪ್ರದಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com