ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!

ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 
ಮಣಿಪುರ ಹಿಂಸಾಚಾರ
ಮಣಿಪುರ ಹಿಂಸಾಚಾರ

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 

ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾರೆ. 

ಈ ಗ್ರಾಮವು ಬೆಟ್ಟಗಳಲ್ಲಿ ನೆಲೆಗೊಂಡಿದೆ ಮತ್ತು ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಸೆಪ್ಟೆಂಬರ್ 8 ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೆ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದ ನಂತರ ಮೇ.03 ರಿಂದ ಆರಂಭವಾದ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 160 ಮಂದಿ ಸಾವನ್ನಪ್ಪಿದ್ದಾರೆ. 

ಮಣಿಪುರದಲ್ಲಿ ಮೈತೆ ಸಮುದಾಯದವರು ಶೇ.'53 ರಷ್ಟಿದ್ದು, ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗ, ಕುಕಿ ಸಮುದಾಯಗಳು ಶೇ.40 ರಷ್ಟಿದ್ದು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com