ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಪ್ರಿಯಕರನಿಂದ ಲಿವ್-ಇನ್ ಪಾರ್ಟನರ್‌ ಹತ್ಯೆ!

ತನ್ನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ನಂತರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟನರ್‌ ಅನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಪಾಲ್ಘರ್: ತನ್ನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ನಂತರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟನರ್‌ ಅನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆಗಸ್ಟ್ 9 ಮತ್ತು 12ರ ನಡುವೆ ಈ ಘಟನೆ ನಡೆದಿದ್ದು, 28 ವರ್ಷದ ಸಂತ್ರಸ್ತೆಯ ಶವ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪಾಲ್ಘರ್‌ನ ವಸಾಯಿ ಪ್ರದೇಶದ ನಿವಾಸಿಯಾಗಿರುವ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ವಸಾಯಿ ಸಹಾಯಕ ಪೊಲೀಸ್ ಆಯುಕ್ತ ಪದ್ಮಜಾ ಬಡೆ ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬವು ಆಗಸ್ಟ್ 14 ರಂದು ನೈಗಾಂವ್ ಪೊಲೀಸರಿಗೆ ಆಕೆ ಕಾಣಿಯಾಗಿರುವ ಬಗ್ಗೆ ದೂರನ್ನು ದಾಖಲಿಸಿತ್ತು. ಆರೋಪಿ ಶವವನ್ನು ಗುಜರಾತ್‌ನ ನೆರೆಯ ವಾಪಿ ಪಟ್ಟಣದಲ್ಲಿ ವಿಲೇವಾರಿ ಮಾಡಿರಬಹುದು ಎಂದು ನೈಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಇದರಿಂದ ಆರೋಪಿ ಕೋಪಗೊಂಡಿದ್ದ. ಮಹಿಳೆ ದೂರನ್ನು ಹಿಂಪಡೆಯಲು ನಿರಾಕರಿಸಿದ್ದರಿಂದ, ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಬಡೆ ತಿಳಿಸಿದ್ದಾರೆ.

ಸಂತ್ರಸ್ತೆಯ ಸಹೋದರಿಯ ದೂರಿನ ಮೇರೆಗೆ ನೈಗಾಂವ್ ಪೊಲೀಸರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯ ಕಣ್ಮರೆ) ಅಡಿಯಲ್ಲಿ ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

ಆರೋಪಿಯು ಮತ್ತೊಂದು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ಎದುರಿಸುತ್ತಿದ್ದಾನೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com