ಬಿಹಾರ: 32 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಾಗ್ಮತಿ ನದಿಯಲ್ಲಿ ಪಲ್ಟಿ; 20 ಮಕ್ಕಳ ರಕ್ಷಣೆ, 10 ಮಂದಿ ನಾಪತ್ತೆ
ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
Published: 14th September 2023 02:39 PM | Last Updated: 14th September 2023 02:53 PM | A+A A-

ಸಾಂದರ್ಭಿಕ ಚಿತ್ರ
ಪಾಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಇದುವರೆಗೂ 20 ಮಕ್ಕಳನ್ನು ರಕ್ಷಿಸಲಾಗಿದ್ದು, 10 ಮಕ್ಕಳು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನು ಪ್ರಾರಂಭಿಸಿದೆ.
ಇದನ್ನೂ ಓದಿ: ಮಲಪ್ಪುರಂನಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿ: 6 ಮಕ್ಕಳು ಸೇರಿ 15 ಸಾವು, ಹಲವರು ನಾಪತ್ತೆ
ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ತುರ್ತಾಗಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಕೋರಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ ಎಂದು ಹೇಳಿದ್ದಾರೆ.