ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು: ಡಿಸಿಎಂ ಡಿಕೆ ಶಿವಕುಮಾರ್

ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ತೆಲಂಗಾಣ: ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತೆಲಂಗಾಣದಲ್ಲಿ ನೋಟವನ್ನು ಬದಲಾಯಿಸಲಿದೆ. ಅಲ್ಲದೇ, ದೇಶದ ನೋಟವನ್ನು ಬದಲಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದೇಶಕ್ಕೆ ಭರವಸೆ ನೀಡಿದ್ದೇವೆ ಎಂದರು. 

ಮತ್ತೊಂದೆಡೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, 2024ರಲ್ಲಿ ಬಿಜೆಪಿ ಸರ್ಕಾರವನ್ನು ನಾವು ಕಿತ್ತು ಹಾಕಬೇಕು ಎಂಬುದು ಎರಡು ದಿನಗಳ ಸಭೆಯ ಸ್ಪಷ್ಟ ಕಾರ್ಯಸೂಚಿಯಾಗಿತ್ತು. ಆದ್ದರಿಂದ ಇದು ದೇಶದಾದ್ಯಂತ ಪಕ್ಷದ ಕಾರ್ಯಕರ್ತರಿಗೆ ಸಿಡಬ್ಲ್ಯುಸಿಯಿಂದ ಕರೆ ನೀಡಲಾಗಿದೆ. ಈಗ ವಿಶ್ರಾಂತಿ ತೆಗೆದುಕೊಳ್ಳದೆ, ಗೆಲ್ಲಲು ಹೋರಾಡಬೇಕಾಗಿದೆ. ಎಲ್ಲಾ ಐದು ರಾಜ್ಯಗಳಲ್ಲಿ ಸರ್ಕಾರ ರಚಿಸಲಿದ್ದೇವೆ ಎಂಬ ಬಲವಾದ ವಿಶ್ವಾಸವಿದೆ ಎಂದು ತಿಳಿಸಿದರು.

 ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. ಬಿಜೆಪಿ ಹಾಗೂ ಇತರೆ ಪಕ್ಷಗಳನ್ನು ಸೋಲಿಸುವುದು ಹೇಗೆ ಎಂಬ ಬಗ್ಗೆ ಚರ್ಚಿಸಿ ಕಾರ್ಯತಂತ್ರ ರೂಪಿಸಿದ್ದೇವೆ. ಮುಂಬರುವ ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com