ತೆಲಂಗಾಣ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಭೇಟಿಯಾದ ಅಮಿತ್ ಶಾ!

ಕೇಂದ್ರ ಗೃಹ ಸಚಿವ ಅಮಿತ್ ಶಾ  ಹಾಗೂ ಒಲಿಂಪಿಕ್ ಪದಕ ವಿಜೇತೆ,  ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭೇಟಿಯಾಗಿದ್ದಾರೆ.
ಅಮಿತ್ ಶಾ, ಪಿವಿ ಸಿಂಧು
ಅಮಿತ್ ಶಾ, ಪಿವಿ ಸಿಂಧು

ಹೈದರಾಬಾದ್‌: ಕೇಂದ್ರ ಗೃಹ ಸಚಿವ ಅಮಿತ್ ಶಾ  ಹಾಗೂ ಒಲಿಂಪಿಕ್ ಪದಕ ವಿಜೇತೆ,  ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭೇಟಿಯಾಗಿದ್ದಾರೆ.

 ಪಿ.ವಿ. ಸಿಂಧು ತಮ್ಮ ತಂದೆ ಪಿ.ವಿ. ರಮಣ ಅವರೊಂದಿಗೆ ನಗರದ ಸಿಆರ್‌ಪಿಎಫ್ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಶಾ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಹಾಗೂ ರಾಜ್ಯ ಬಿಜೆಪಿ ಮುಖ್ಯಸ್ಥ ಜಿ.ಕಿಶನ್ ರೆಡ್ಡಿ ಉಪಸ್ಥಿತರಿದ್ದರು. ಭಾನುವಾರ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸುವುದಕ್ಕಾಗಿ ಅಮಿತ್ ಶಾ ಹೈದರಾಬಾದ್ ಗೆ ಆಗಮಿಸಿದ್ದಾರೆ. 

ಸಿಂಧು ಅವರ ಭೇಟಿಯ ಫೋಟೋಗಳನ್ನು ಅಮಿತ್ ಶಾ ತಮ್ಮ ಎಕ್ಸ್  ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಸಾಧಾರಣ ಕ್ರೀಡಾ ಪ್ರತಿಭೆಗಾಗಿ ಆಕೆ ಪಡೆದಿರುವ ಅಂತಾರಾಷ್ಟ್ರೀಯ ಮನ್ನಣೆಗೆ ರಾಷ್ಟ್ರವು ಹೆಮ್ಮೆ ಪಡುತ್ತದೆ. ಆಕೆಯ ಬದ್ಧತೆ, ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಯುವ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

 ನಗರದ ಪರೇಡ್ ಮೈದಾನದಲ್ಲಿ ಭಾನುವಾರ ನಡೆಯಲಿರುವ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮಿತ್ ಶಾ ಭಾಗವಹಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com