ಮಹಿಳಾ ಮೀಸಲಾತಿಯಲ್ಲಿ OBC, SC, ST ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಿ: ಮಾಯಾವತಿ
ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು, ಮೀಸಲಾತಿಯಲ್ಲಿ ಒಬಿಸಿ, ಎಸ್‌ಸಿ ಮತ್ತು...
Published: 19th September 2023 05:16 PM | Last Updated: 19th September 2023 05:16 PM | A+A A-

ಮಾಯಾವತಿ
ಲಖನೌ: ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಗಳವಾರ ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು, ಮೀಸಲಾತಿಯಲ್ಲಿ ಒಬಿಸಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗದ ಮಹಿಳೆಯರಿಗೆ ಪ್ರತ್ಯೇಕ ಕೋಟಾ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. .
ಬಿಎಸ್‌ಪಿ ಜೊತೆಗೆ ಹೆಚ್ಚಿನ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ಪರವಾಗಿ ಮತ ಚಲಾಯಿಸಲಿವೆ. ಚರ್ಚೆಯ ನಂತರ ಈ ಮಸೂದೆಯು ಬಹುಕಾಲದಿಂದ ಬಾಕಿ ಉಳಿದಿರುವುದರಿಂದ ಈ ಬಾರಿ ಅಂಗೀಕಾರವಾಗಲಿದೆ ಎಂದು ಮಾಯಾವತಿ ಅವರು ಹೇಳಿದ್ದಾರೆ.
ಇದನ್ನು ಓದಿ: ಮಹಿಳಾ ಮೀಸಲಾತಿ ಅವಧಿ 15 ವರ್ಷ, ಶೇ.33 ರೊಳಗೇ SC/ST ಗೆ ಕೋಟಾ; 2024 ಚುನಾವಣೆಗೆ ಜಾರಿ ಕಷ್ಟಸಾಧ್ಯ!
ಸಂಸತ್ತಿನಲ್ಲಿ ನನ್ನ ಪಕ್ಷದ ಪರವಾಗಿ ನಾನು ಈ ಹಿಂದೆ ಹೇಳಿದ್ದೇನೆಂದರೆ, ಮಹಿಳೆಯರ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಈಗ ಪ್ರಸ್ತಾಪಿಸಿದ ಶೇ. 33ರ ಬದಲಿಗೆ ಶೇ. 50 ರಷ್ಟು ಮೀಸಲಾತಿ ನೀಡಬೇಕು. ಸರ್ಕಾರ ಈ ಬಗ್ಗೆ ಯೋಚಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ, ಮಹಿಳಾ ಮೀಸಲಾತಿಯಲ್ಲಿ ಒಬಿಸಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ಖಾತ್ರಿಪಡಿಸಬೇಕು. ಇಲ್ಲದಿದ್ದರೆ ಅವರಿಗೆ ಅನ್ಯಾಯವಾಗುತ್ತದೆ ಉತ್ತರ ಪ್ರದೇಶ ಮಾಜಿ ಸಿಎಂ ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದ್ದು, ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ.