ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆ
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ.
Published: 19th September 2023 11:02 AM | Last Updated: 19th September 2023 08:56 PM | A+A A-

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ.
ಐದು ದಿನಗಳವರೆಗೆ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶ ನಿನ್ನೆಯಿಂದ ಆರಂಭಗೊಂಡಿದೆ. ಇಂದಿನಿಂದ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಐತಿಹಾಸಿಕ! ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ, ಕಾಂಗ್ರೆಸ್ ಸ್ವಾಗತ
ಈ ನಡುವೆ ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ ಮಸೂದೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿಯವರು, ‘ಇದು ನಮ್ಮದು, ಅಪ್ನಾ ಹೈ’ ಎಂದು ಹೇಳಿದ್ದಾರೆ.