ಅಸ್ಸಾಂನಲ್ಲಿ ಒಂದು ತಿಂಗಳ ಮಗುವಿನ ತಾಯಿಯ ಅತ್ಯಾಚಾರ ಹಾಗೂ ಬರ್ಬರ ಹತ್ಯೆ!
ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Published: 19th September 2023 05:04 PM | Last Updated: 19th September 2023 05:04 PM | A+A A-

ಸಾಂದರ್ಭಿಕ ಚಿತ್ರ
ಗುವಾಹಟಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲೆಯ ಪಸಾತಿಯಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಮಹಿಳೆ 25 ವರ್ಷದ ನಿಕಿತಾ ದೇವಿ ಎಂದು ತಿಳಿದುಬಂದಿದ್ದು, ಆಕೆಯ ಪತಿ ಕೆಲಸ ನಿಮಿತ್ತ ಹೊರಹೋಗಿದ್ದಾಗ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಆಕೆ ತನ್ನ ನವಜಾತ ಶಿಶುವಿನೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ದುಷ್ಕರ್ಮಿಗಳು ಬಾಗಿಲು ಮುರಿದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಆಕೆಯ ಪತಿ ಹತ್ತಿರದ ಚಿತ್ರಮಂದಿರದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಘಟನೆ ನಡೆದಾಗ ಅವರು ಮನೆಯಲ್ಲಿರಲಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳ ಬಂಧನ!
ನಾನು ಕಳೆದ ಒಂದು ವರ್ಷದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಮಗೆ ಯಾವುದೇ ಸಮಸ್ಯೆಯ ಇರಲಿಲ್ಲ. ಆದರೆ ಆಗಾಗ ಕೆಲವರು ತಡರಾತ್ರಿ ಮನೆ ಸುತ್ತಮುತ್ತ ಅಲೆದಾಡುವುದನ್ನು ನನ್ನ ಹೆಂಡತಿ ಗಮನಿಸಿದಳು. ಆದರೆ ನಾನು ಅದರ ಬಗ್ಗೆ ಹೆಚ್ಚು ಗಮನ ಹರಿಸಲಿಲ್ಲ. ಇಂದು ಬೆಳಗ್ಗೆ ನಾನು ಮನೆಗೆ ಬಂದಾಗ ಘಟನೆಯ ಬಗ್ಗೆ ನನಗೆ ತಿಳಿಯಿತು ಎಂದು ಪತಿ ಸುದ್ದಿಗಾರರಿಗೆ ತಿಳಿಸಿದರು.
ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ತನಿಖೆ ಪ್ರಾರಂಭಿಸಲಾಗಿದೆ. ನಾವು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.