ಪ್ರಧಾನಿ ಮೋದಿ-ಎಸ್ ಜೈಶಂಕರ್
ಪ್ರಧಾನಿ ಮೋದಿ-ಎಸ್ ಜೈಶಂಕರ್

ಕೆನಡಾ ವಿವಾದ: ಪ್ರಧಾನಿ ಮೋದಿ ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಮಹತ್ವದ ಮಾತುಕತೆ

ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಸಂಘರ್ಷದ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಸಂಘರ್ಷದ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಜೂನ್‌ನಲ್ಲಿ ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರಿಗೆ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ ಹೌಸ್ ಆಫ್ ಕಾಮನ್ಸ್‌ಗೆ ತಿಳಿಸಿದ್ದರು.

ಇದು ಉಭಯ ದೇಶಗಳ ನಡುವಿನ ಸಂಬಂಧ ಹಳಸುವಂತೆ ಮಾಡಿದ್ದು, ಜಾಗತಿಕ ಮಟ್ಟದಲ್ಲಿ ಟ್ರುಡೋ ಹೇಳಿಕೆ ವ್ಯಾಪಕ ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಭಾರತ-ಕೆನಡಾ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈಶಂಕರ್ ಹೊಸ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆಗಳನ್ನು ಅನುಸರಿಸಿ, ಭಾರತ ಮತ್ತು ಕೆನಡಾ ತಲಾ ಒಬ್ಬ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿವೆ. ಕೇಂದ್ರ ಸರ್ಕಾರವು ಆರೋಪಗಳನ್ನು "ಅಸಂಬದ್ಧ" ಮತ್ತು "ಪ್ರೇರಿತ" ಎಂದು ತಿರಸ್ಕರಿಸಿದೆ.

ಹರ್ದೀಪ್ ಸಿಂಗ್ ನಿಜ್ಜರ್, 4ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾಗಿದ್ದ. ಅತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ. ಆತನ ಮೇಲೆ ಭಾರತೀಯ ತನಿಖಾ ಏಜೆನ್ಸಿಗಳು 10 ಲಕ್ಷ ರೂ ಬಹುಮಾನ ಕೂಡ ಘೋಷಣೆ ಮಾಡಿದ್ದವು.

Related Stories

No stories found.

Advertisement

X
Kannada Prabha
www.kannadaprabha.com