ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ; ನಾಳೆ ರಾಜ್ಯಸಭೆಯಲ್ಲಿ ಮಂಡನೆ ಸಾಧ್ಯತೆ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹು ನಿರೀಕ್ಷಿತ ನಾರಿ ಶಕ್ತಿ ವಂದನ್ ವಿಧೇಯಕ(ಮಹಿಳಾ ಮೀಸಲಾತಿ ಮಸೂದೆ)ಯನ್ನು ಬುಧವಾರ ಲೋಕಸಭೆಯಲ್ಲಿ...
ಲೋಕಸಭೆ
ಲೋಕಸಭೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹು ನಿರೀಕ್ಷಿತ ನಾರಿ ಶಕ್ತಿ ವಂದನ್ ವಿಧೇಯಕ(ಮಹಿಳಾ ಮೀಸಲಾತಿ ಮಸೂದೆ)ಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಮಂಗಳವಾರ ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಹಿಳಾ ಮೀಸಲಾಯಿತ ಮಸೂದೆಯನ್ನು ಮಂಡಿಸಿದ್ದರು.

ಸುಮಾರು 8 ಗಂಟೆಗಳ ಚರ್ಚೆಯ ಬಳಿಕ ಲೋಕಸಭೆ ಸ್ವೀಕರ್ ಓಂ ಬಿರ್ಲಾ ಅವರು ಇಂದು ನಾರಿ ಶಕ್ತಿ ವಂದನ್ ವಿಧೇಯಕವನ್ನು ಮತಕ್ಕೆ ಹಾಕಿದರು.

ಬಹುತೇಕ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ವು ಬೆಂಬಲಿಸಿದ್ದು, ವಿಧೇಯಕದ ಪರವಾಗಿ 454 ಸಂಸದರು ಮತ ಚಲಾಯಿಸಿದರೆ, ಇಬ್ಬರು ಸಂಸದರು ಮಾತ್ರ ಈ ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ನಾರಿ ಶಕ್ತಿ ವಂದನ್ ವಿಧೇಯಕವನ್ನು ಕೇಂದ್ರ ಸರ್ಕಾರ ನಾಳೆ ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.

ಈ ಮಸೂದೆ ಮೂಲಕ ಸಂವಿಧಾನದ 330 ಮತ್ತು 332ನೇ ವಿಧಿಗಳಿಗೆ ತಿದ್ದುಪಡಿ ತರಲಾಗುತ್ತಿದ್ದು, ಈ ಮೂಲಕ ಲೋಕಸಭೆಯ 543 ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನಸಭೆಗಳಲ್ಲಿ 4,109 ಸ್ಥಾನಗಳ ಪೈಕಿ 1,370 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com