2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ
ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್...
Published: 20th September 2023 08:41 PM | Last Updated: 20th September 2023 08:41 PM | A+A A-

ಜಿ20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್
ನವದೆಹಲಿ: ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ಬುಧವಾರ ತಿಳಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಜಿ20 ಶೃಂಗಸಭೆಯಲ್ಲಿ ಉಭಯ ನಾಯಕರ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಬೈಡೆನ್‌ಗೆ ಆಹ್ವಾನ ನೀಡಿದ್ದಾರೆ ಎಂದು ಗಾರ್ಸೆಟ್ಟಿ ಹೇಳಿದ್ದಾರೆ.
ಇದನ್ನು ಓದಿ: G20 ಶೃಂಗಸಭೆಯು ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂಬುದನ್ನು ಸಾಬೀತುಪಡಿಸಿದೆ: ಜೊ ಬೈಡನ್
2024, ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ.
ಬೈಡೆನ್ ಅವರು ಪ್ರಧಾನಿ ಮೋದಿ ಆಹ್ವಾನವನ್ನು ಒಪ್ಪಿಕೊಂಡರೆ, ಬರಾಕ್ ಒಬಾಮ ಅವರ ನಂತರ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವ ಎರಡನೇ ಅಮೆರಿಕ ಅಧ್ಯಕ್ಷ ಎನಿಸಿಕೊಳ್ಳಲಿದ್ದಾರೆ.