ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲು ಸರ್ವಪಕ್ಷಗಳ ಒಮ್ಮತದ ತೀರ್ಮಾನ- ಡಿ ಕೆ ಶಿವಕುಮಾರ್
ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Published: 20th September 2023 12:08 PM | Last Updated: 20th September 2023 01:25 PM | A+A A-

ಡಿ ಕೆ ಶಿವಕುಮಾರ್
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕದ ಮುಂದಿನ ಹೆಜ್ಜೆ ಕುರಿತು ತೀರ್ಮಾನಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಸರ್ವಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಕಾವೇರಿ ಜಲಾನಯನ ಪ್ರದೇಶಗಳ ಶಾಸಕರ ಸಭೆ ಕರೆದಿದ್ದರು.
ಸಭೆಯಲ್ಲಿ ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.