ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು
ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
Published: 22nd September 2023 12:33 PM | Last Updated: 22nd September 2023 02:44 PM | A+A A-

ತಪ್ಪಿಸಿಕೊಂಡ ಮೊಬೈಲ್ ಕಳ್ಳರು
ಲಖನೌ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಉತ್ತರ ಪ್ರದೇಶದ ಜಾನ್ಸಿ ರೈಲ್ವೆ ಕೋರ್ಟ್ ಗೆ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮೂವರು ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋರ್ಟ್ ಹೊರಭಾಗದಲ್ಲಿ ಪೊಲೀಸ್ ವ್ಯಾನ್ ನಿಲ್ಲಿಸಲಾಗಿತ್ತು. ಆದರೆ ಯಾವುದೇ ಭದ್ರತಾ ಸಿಬಂದಿ ಇಲ್ಲದಿರುವುದನ್ನು ಗಮನಿಸಿದ ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಇಬ್ಬರಿಗೆ ಗಾಯ
ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ರಸ್ತೆಯಲ್ಲಿ ಓಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಸಂದರ್ಭದಲ್ಲಿ ವ್ಯಾನ್ ನೊಳಗೆ ಒಟ್ಟು ಏಳು ಆರೋಪಿಗಳಿದ್ದರು. ಇದರಲ್ಲಿ ಮೂವರು ಆರೋಪಿಗಳು ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ. ಈ ಘಟನೆ ಮಂಗಳವಾರ (ಸೆ.19) ಮಧ್ಯಾಹ್ನ ನಡೆದಿತ್ತು. 11 ಜನ ಪೊಲೀಸ್ ಅಧಿಕಾರಿಗಳು ಒಟ್ಟು ಏಳು ಆರೋಪಿಗಳನ್ನು ಜಾನ್ಸಿ ರೈಲ್ವೆ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯುತ್ತಿದ್ದರು. ಪರಾರಿಯಾಗಿರುವ ಮೂವರು ಆರೋಪಿಗಳ ವಿರುದ್ಧ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳವುಗೈದ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬ್ರಿಜೇಂದ್ರ (27ವರ್ಷ), ಶೈಲೇಂದ್ರ (20ವರ್ಷ) ಹಾಗೂ ಜ್ಞಾನಪ್ರಸಾದ್ (23 ವರ್ಷ) ಎಂದು ಗುರುತಿಸಲಾಗಿದೆ.
झांसी में तीन कैदी पुलिस वैन से फरार@Uppolice @jhansipolice pic.twitter.com/kq4n74zzfk
— Anmol dubey ( अनमोल दुबे ) (@anmoldubey110) September 21, 2023
ಪರಾರಿಯಾಗಿರುವ ಮೂವರು ಆರೋಪಿಗಳು ನಾಪತ್ತೆಯಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮೂವರು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಪಾಣಿಪತ್: ಗಂಡ, ಮಕ್ಕಳ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ತನಿಖೆಗೆ ಸಮಿತಿ ರಚನೆ
ಇನ್ನುಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎರಡು ಪೊಲೀಸ್ ತಂಡವನ್ನು ರಚಿಸಲಾಗಿದೆ. ರೈಲ್ವೆ ಕೋರ್ಟ್ ಸುತ್ತಮುತ್ತಲಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.