ಮುಂಬೈ: ಮುಂಬೈನ ಉಪನಗರ ಓಶಿವಾರದಲ್ಲಿರುವ ಹಿರಾ ಪನ್ನಾ ಮಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 3.10ರ ಸುಮಾರಿಗೆ ಓಶಿವಾರಾ ಪೊಲೀಸ್ ಠಾಣೆ ಸಮೀಪವಿರುವ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಂತಸ್ತಿನ ಕಟ್ಟಡದಿಂದ ಮಹಿಳೆ ಸೇರಿದಂತೆ ಕನಿಷ್ಠ 14 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಮೂವರು ಸಿಬ್ಬಂದಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
12 ಅಗ್ನಿಶಾಮಕ ಇಂಜಿನಿಯರ್ ಗಳು ಸೇರಿದಂತೆ 25 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿಲ್ಲವಾದರೂ, ಇನ್ನೂ ಕೆಲವರು ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.
Advertisement