'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!
ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.
Published: 22nd September 2023 08:51 PM | Last Updated: 23rd September 2023 08:18 PM | A+A A-

ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್
ನವದೆಹಲಿ: ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.
ರಾಷ್ಟ್ರ ರಾಜಧಾನಿಯಲ್ಲಿರುವ ಡ್ಯಾನಿಶ್ ಅಲಿ ಅವರ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡ್ಯಾನಿಶ್ ಅಲಿ ಅವರನ್ನು ತಬ್ಬಿಕೊಳ್ಳುವ ಮೂಲಕ ಅವರಿಗೆ ಪ್ರೀತಿಯನ್ನು ತೋರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ (ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕಿ ದುಕಾನ್) ಎಂದು ಹೇಳಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಲೋಕಸಭೆಯಲ್ಲಿ ಮುಸ್ಲಿಂ ಸಂಸದ ಡ್ಯಾನಿಶ್ ಅಲಿಯನ್ನು 'ಉಗ್ರ', 'ಪಿಂಪ್' ಎಂದು ನಿಂದಿಸಿದ ಬಿಜೆಪಿ ಸಂಸದ!
ಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿಯಿಂದ ಡ್ಯಾನಿಶ್ ಅಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ. ಡ್ಯಾನಿಶ್ ಅಲಿ ವಿರುದ್ಧ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿರೋಧ ಪಕ್ಷಗಳ ಕೋಪಕ್ಕೆ ಕಾರಣವಾಗಿದ್ದು, ಬಿಧುರಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಸ್ಪೀಕರ್ ಈ ಬಗ್ಗೆ ವಿಚಾರಣೆ ನಡೆಸದಿದ್ದರೆ ಸಂಸತ್ತನ್ನು ತೊರೆಯುವುದಾಗಿ INDIA ಮೈತ್ರಿಕೂಟ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಬಿಜೆಪಿ ಸಂಸದ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಸದ ಸ್ಥಾನ ತ್ಯಜಿಸುತ್ತೇನೆ: ಡ್ಯಾನಿಶ್ ಅಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ಪಿ ನಾಯಕ, ದಕ್ಷಿಣ ದೆಹಲಿಯ ಬಿಜೆಪಿ ಸಂಸದ ಬಿಧುರಿ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಇಡೀ ರಾಷ್ಟ್ರವನ್ನು ಅವಮಾನಿಸಿದ್ದಾರೆ. ರಮೇಶ್ ಬಿಧುರಿ ವಿರುದ್ಧ ಬಿಜೆಪಿ ಯಾವ ಕ್ರಮ ತೆಗೆದುಕೊಳ್ಳುತ್ತದೆಯೇ ಅಥವಾ ಅವರನ್ನು ಬಡ್ತಿ ನೀಡಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸುತ್ತದೆಯೇ ಎಂಬುದು ಕಾದು ನೋಡಬೇಕಾದ ವಿಷಯವಾಗಿದೆ ಎಂದು ಹೇಳಿದರು.