ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆ: ಪ್ರಧಾನಿ ಮೋದಿ

ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  

ಮಹಿಳಾ ಮೀಸಲಾತಿ ಮಸೂದೆ ಅಂದರೆ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಕಳೆದ ತಡರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ಹಲವು ಗಂಟೆಗಳ ಚರ್ಚೆಯ ನಂತರ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿಯವರಿಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಮಹಿಳಾ ಸಂಸದರು ಅದ್ದೂರಿ ಸ್ವಾಗತ ಕೋರಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ನಾನು ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಅಭಿನಂದಿಸುತ್ತೇನೆ. ಸೆಪ್ಟೆಂಬರ್ 21 ಮತ್ತು 22 ರಂದು ಹೊಸ ಇತಿಹಾಸವನ್ನು ರಚಿಸಿದ್ದೇವೆ. ಈ ಇತಿಹಾಸವನ್ನು ರಚಿಸಲು ಜನರು ನಮಗೆ ಈ ಅವಕಾಶವನ್ನು ನೀಡಿದ್ದಾರೆ ಎಂಬುದು ನಮ್ಮ ಸೌಭಾಗ್ಯ" ಎಂದು ಖುಷಿಯಿಂದ ಹೇಳಿಕೊಂಡರು.

ಮುಂದಿನ ಪೀಳಿಗೆಯವರು ಈ ಅಧಿನಿಯಮ ಬಗ್ಗೆ ಮಾತನಾಡುತ್ತಾರೆ. ಸಂಸತ್ತಿನಲ್ಲಿ 'ನಾರಿ ಶಕ್ತಿ ವಂದನ್ ಅಧಿನಿಯಂ' ಬಹುಮತದೊಂದಿಗೆ ಅಂಗೀಕಾರಗೊಂಡಿದ್ದಕ್ಕಾಗಿ ನಾನು ದೇಶವನ್ನು ಅಭಿನಂದಿಸುತ್ತೇನೆ ಎಂದು ದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ನಡೆದ ನಾರಿ ಶಕ್ತಿ ವಂದನ್-ಅಭಿನಂದನ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ಇದು ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆಯಾಗಿದೆ ಎಂದು ಹೇಳಿದರು.

ಕಳೆದ ವರ್ಷಗಳಲ್ಲಿ, ಮಹಿಳೆಯರಿಗೆ ಸಂಬಂಧಿಸಿದ ಎಲ್ಲಾ ನಿರ್ಬಂಧಗಳನ್ನು ಮುರಿಯಲು ನಾವು ಪ್ರಯತ್ನಗಳನ್ನು ಮಾಡಿದ್ದೇವೆ. ನಮ್ಮ ಸರ್ಕಾರವು ಮಹಿಳೆಯರಿಗೆ ಗೌರವ, ಭದ್ರತೆ, ಸಮೃದ್ಧಿಯನ್ನು ನೀಡಲು ಯೋಜನೆಗಳನ್ನು ರೂಪಿಸಿದೆ ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ ಎಂದರು. ಈ ಕಾನೂನಿನ ಮೂಲಕ ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಕಳೆದ ಮೂರು ದಶಕಗಳಿಂದ ಪ್ರಯತ್ನಗಳನ್ನು ಮಾಡುತ್ತಿದೆ. ಇದು ನಮ್ಮ ಬದ್ಧತೆಯಾಗಿತ್ತು,ಅದನ್ನು ನಾವು ಪೂರೈಸಿದ್ದೇವೆ ಎಂದರು. ಇದಕ್ಕೂ ಮುನ್ನ ಮಹಿಳಾ ಕಾರ್ಯಕರ್ತರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com