ಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆ
ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು.
Published: 24th September 2023 04:52 PM | Last Updated: 25th September 2023 12:45 PM | A+A A-

ಕಾವೇರಿ ನೀರಿನ ವಿಚಾರವಾಗಿ ತಿರುಚ್ಚಿ ರೈತರ ಪ್ರತಿಭಟನೆ
ತಿರುಚ್ಚಿ: ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು.
ಇದೇ ವೇಳೆ ಕರ್ನಾಟಕದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಸೆಪ್ಟೆಂಬರ್ 13 ರಿಂದ ತನ್ನ ನೆರೆಯ ರಾಜ್ಯ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದಾಗಿನಿಂದ ಕರ್ನಾಟಕದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳ ಕರೆ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲವಿವಾದದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು, ಸಿಡಬ್ಲ್ಯುಎಂಎ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸಭೆಗಳನ್ನು ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಕಾವೇರಿ ನೀರನ್ನು ದಿನಕ್ಕೆ ಸದ್ಯ ಹರಿಸುತ್ತಿರುವ 5,000 ರಿಂದ 7,200 ಕ್ಯೂಸೆಕ್‌ಗೆ ಹೆಚ್ಚಿಸುವಂತೆ ಸೂಚಿಸಲು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದೆ.
ಕರ್ನಾಟಕದಿಂದ ಕಾವೇರಿ ನದಿ ನೀರು ಬಿಡುಗಡೆಗೆ ಹೊಸ ನಿರ್ದೇಶನ ನೀಡುವಂತೆ ಕೋರಿರುವ ತಮಿಳುನಾಡು, ನೆರೆಯ ರಾಜ್ಯವು ತನ್ನ ನಿಲುವನ್ನು ಬದಲಾಯಿಸಿದೆ ಮತ್ತು ಈ ಹಿಂದೆ ಒಪ್ಪಿಕೊಂಡಿದ್ದಕ್ಕಿಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದೆ ಎಂದು ದೂರಿದೆ.