ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ
ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ

ಬಿಜೆಪಿಗೆ ಭಾರಿ ಹಿನ್ನಡೆ; ಎನ್ ಡಿಎನಿಂದ ಹೊರ ನಡೆದ ಎಐಎಡಿಎಂಕೆ

ಲೋಕಸಭೆ ಚುನಾವಣೆ ವೇಳೆ ಇನ್ನು ಕೆಲವು ಪ್ರಾದೇಶಿಕ ಪಕ್ಷಗಳನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಬಿಜೆಪಿಯ ಪ್ರಮುಖ ಮಿತ್ರ ಪಕ್ಷಗಳಲ್ಲಿ ಒಂದಾದ ಎಐಎಡಿಎಂಕೆ ಸೋಮವಾರ ಎನ್ ಡಿಎ...

ಚೆನ್ನೈ: ಲೋಕಸಭೆ ಚುನಾವಣೆ ವೇಳೆ ಇನ್ನು ಕೆಲವು ಪ್ರಾದೇಶಿಕ ಪಕ್ಷಗಳನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಬಿಜೆಪಿಯ ಪ್ರಮುಖ ಮಿತ್ರ ಪಕ್ಷಗಳಲ್ಲಿ ಒಂದಾದ ಎಐಎಡಿಎಂಕೆ ಸೋಮವಾರ ಎನ್ ಡಿಎ ಮೈತ್ರಿಕೂಟದಿಂದ ಹೊರ ನಡೆದಿದೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ದಿಂದ ತಾನು ಹೊರಬಂದಿರುವುದಾಗಿ ಎಐಎಡಿಎಂಕೆ ಘೋಷಿಸಿದೆ.

ಇಂದು ನಡೆದ ಎಐಎಡಿಎಂಕೆಯ ಜಿಲ್ಲಾ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುವ ಸರ್ವಾನುಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎರಡು ಕೋಟಿಗೂ ಹೆಚ್ಚು ಎಐಎಡಿಎಂಕೆ ಕಾರ್ಯಕರ್ತರ ಅಭಿಪ್ರಾಯ ಮತ್ತು ಭಾವನೆಗಳಿಗೆ ಮಣಿದು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಆಗಸ್ಟ್ 20 ರಂದು ನಡೆದ ಎಐಎಡಿಎಂಕೆಯ ಐತಿಹಾಸಿಕ ರಾಜ್ಯ ಮಟ್ಟದ ಸಮಾವೇಶದ ವೇಳೆ ಬಿಜೆಪಿಯ ರಾಜ್ಯ ನಾಯಕತ್ವವು ತಮ್ಮನ್ನು ಕೀಳಾಗಿ ನೋಡಿದೆ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಟೀಕಿಸಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಹೇಳಲಾಗಿದೆ.

ಕಳೆದ ಒಂದು ವರ್ಷದಿಂದ ಬಿಜೆಪಿಯ ರಾಜ್ಯ ನಾಯಕತ್ವವು, ದುರುದ್ದೇಶದಿಂದ ಎಐಎಡಿಎಂಕೆಯನ್ನು ಟೀಕಿಸುತ್ತಿದೆ ಎಂದು ನಿರ್ಣಯವು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com