
ಸಾಂದರ್ಭಿಕ ಚಿತ್ರ
ಲಕ್ನೋ: ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶ್ರೇಷ್ಠ ತಿವಾರಿ (30) ಮೃತ ಯುವಕ. ಲಖನೌದ ಹಜರತ್ಗಂಜ್ ಏರಿಯಾದಲ್ಲಿ ಇರುವ ಬಿಜೆಪಿ ಶಾಸಕ ಯೇಗೇಶ್ ಶುಕ್ಲ ಅವರ ಸರ್ಕಾರಿ ನಿವಾಸದಲ್ಲಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ತಿವಾರಿ ಬಾರಾಬಂಕಿ ಜಿಲ್ಲೆಯ ಹೈದರ್ಗಢ ಏರಿಯಾದ ನಿವಾಸಿ.
ಭಾನುವಾರ ರಾತ್ರಿ ಘಟನೆ ನಡೆದಿದ್ದು, ಯಾವುದೇ ದೂರು ದಾಖಲಾಗಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅರವಿಂದ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಅಲ್ಲದೆ, ಆತ್ಮಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: ಹೆಚ್ಚಿನ ಹಣ ನೀಡಲು ನಿರಾಕರಿಸಿದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಬಾಯಿಗೆ ಮೂತ್ರ ವಿಸರ್ಜನೆ!
ಮೃತರನ್ನು ಶಾಸಕರ ಮಾಧ್ಯಮ ತಂಡದ ಸದಸ್ಯರಾದ ಶ್ರೇಷ್ಠ ತಿವಾರಿ ಎಂದು ಗುರುತಿಸಲಾಗಿದ್ದು, ಅವರು ಬಾರಾಬಂಕಿ ಜಿಲ್ಲೆಗೆ ಸೇರಿದವರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ತಿವಾರಿ ಸಾವಿಗೆ ನಿಖರ ಕಾರಣ ಏನೆಂದು ಖಚಿತಪಡಿಸಿಕೊಳ್ಳಲು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಸದ್ಯ ಶ್ರೇಷ್ಠ ತಿವಾರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.