
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂ ನಲಿ ಬಂಧಿಸಲಾಗಿದೆ ಅಸ್ಸಾಂ ನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರ್ ನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಪ್ರಾಪ್ತೆಯೋರ್ವಳು, ತನಗೆ ಸೇನಾ ಮೇಜರ್ ದಂಪತಿಗಳು ಕಿರುಕುಳ ನೀಡಿದ್ದರು ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಬಂಧಿಸಲಾಗಿದೆ ಎಂದು ಎಸ್ ಪಿ ಮಯಾಂಕ್ ಕುಮಾರ್ ಹೇಳಿದ್ದಾರೆ. ಸಂತ್ರಸ್ತೆ ಅಪ್ರಾಪ್ತ ಬಾಲಕಿ, ಹಿಮಾಚಲ ಪ್ರದೇಶದ ಪಾಲಂಪುರಕ್ಕೆ ಮೇಜರ್ ದಂಪತಿಯೊಂದಿಗೆ ತೆರಳಿದ್ದಳು. ಹಫ್ಲಾಂಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಸ್ ಸಿ/ ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. "ತನಿಖೆಯ ಸಮಯದಲ್ಲಿ, ಸೇನಾ ಮೇಜರ್ ಮತ್ತು ಅವರ ಪತ್ನಿ ವಿರುದ್ಧ ಪ್ರಾಥಮಿಕ ಸಾಕ್ಷ್ಯಗಳು ಕಂಡುಬಂದಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ" ಎಂದು ಎಸ್ಪಿ ಹೇಳಿದರು. ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
"ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು" ಎಂದು ಕುಮಾರ್ ಹೇಳಿದರು.