ಕೇರಳ: ನಾಲ್ವರು ನಿಪಾ ಸೋಂಕಿತ ರೋಗಿಗಳು ಸಂಪೂರ್ಣ ಚೇತರಿಕೆ, ಯಾವುದೇ ಹೊಸ ಪ್ರಕರಣಗಳಿಲ್ಲ
ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.
Published: 29th September 2023 11:25 AM | Last Updated: 29th September 2023 08:17 PM | A+A A-

ಸಾಂದರ್ಭಿಕ ಚಿತ್ರ
ಕೋಯಿಕ್ಕೋಡ್: ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ.
'ಒಳ್ಳೆಯ ಸುದ್ದಿ' ಎಂದು ಹಂಚಿಕೊಂಡ ಅವರು, ಸೋಂಕಿತರ ಪರೀಕ್ಷಾ ವರದಿ ಇದೀಗ ನೆಗೆಟಿವ್ ಬಂದಿದೆ. ಅವರನ್ನು ಎರಡು ಬಾರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎರಡು ಬಾರಿಯೂ ವರದಿ ನೆಗೆಟಿವ್ ಎಂದು ತಿಳಿದುಬಂದಿದೆ ಎಂದು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಆರು ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
ಈ ಹಿಂದೆ, ಕೇರಳ ಸರ್ಕಾರವು ಎಲ್ಲಾ ವಲಯಗಳಲ್ಲಿ ವಿಧಿಸಿದ್ದ ಷರತ್ತುಗಳನ್ನು ಹಿಂಪಡೆದಿದೆ ಮತ್ತು ಸೆಪ್ಟೆಂಬರ್ 16 ರಿಂದ ಇಲ್ಲಿಯವರೆಗೆ ನಿಪಾ ವೈರಸ್‌ನ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲದ ಕಾರಣ ಉತ್ತರದ ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದಿದೆ.
ಆದಾಗ್ಯೂ, ಜಿಲ್ಲೆಯ ಅಧಿಕಾರಿಗಳು ಸೋಂಕಿನ ವಿರುದ್ಧ ಜನರು ಜಾಗರೂಕರಾಗಿರಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯನ್ನು ಮುಂದುವರಿಸಬೇಕು ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 14 ರಿಂದ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚಲಾಗಿತ್ತು ಮತ್ತು ಸೆಪ್ಟೆಂಬರ್ 12 ರಂದು ರಾಜ್ಯದಲ್ಲಿ ಮೊದಲ ನಿಪಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ನಂತರ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿತ್ತು.