ಮಧ್ಯ ಪ್ರದೇಶ: ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ; ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ
ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ವರದಿಯಾಗಿದೆ.
Published: 29th September 2023 01:25 AM | Last Updated: 29th September 2023 08:14 PM | A+A A-

ಅತ್ಯಾಚಾರ (ಸಂಗ್ರಹ ಚಿತ್ರ)
ಭೋಪಾಲ್: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಧ್ಯ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ವರದಿಯಾಗಿದೆ.
ಪ್ರಕರಣ ದಾಖಲಾಗಿರುವ ಕಾಂಗ್ರೆಸ್ ನಾಯಕ ಕಾರ್ಪೊರೇಟರ್ ಆಗಿದ್ದು, ಅತ್ಯಾಚಾರವೆಸಗಿ ಆಕೆಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ.
ಪಿಚ್ಚೋರ್ ನಗರದ ಸಾಗರ್ ಘವ್ರಿ (30) ಆರೋಪಿಯಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಉಜ್ಜಯಿನಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆಟೋದಲ್ಲಿ ರಕ್ತದ ಕಲೆ ಪತ್ತೆ, ಚಾಲಕನ ಬಂಧನ
ಘಾವ್ರಿ 4 ತಿಂಗಳ ಗರ್ಭಿಣಿಯಾಗಿದ್ದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಝಾನ್ಸಿಗೆ ಕರೆದೊಯ್ದು ಸೆ.25 ರಂದು ಗರ್ಭಪಾತ ಮಾಡಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿ ಮನೆಗೆ ಬಾರದಿದ್ದಾಗ ಆಕೆಯ ಪೋಷಕರು ಸ್ಥಳೀಯ ಪೊಲೀಸರಿಗೆ ನಾಪತ್ತೆಯಾದವರ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ಪ್ರಶಾಂತ್ ಶರ್ಮಾ ತಿಳಿಸಿದ್ದಾರೆ.
ಆಕೆ ಮರಳಿ ಬಂದ ನಂತರ, ಪೊಲೀಸರು ಆಕೆಯ ದೂರಿನ ಮೇರೆಗೆ ಕ್ರಮ ಕೈಗೊಂಡರು ಮತ್ತು ಅತ್ಯಾಚಾರ ಮತ್ತು ಅಪಹರಣಕ್ಕಾಗಿ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ಅಡಿಯಲ್ಲಿ ಬುಧವಾರ ಘಾವ್ರಿ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಎಂದು ಪ್ರಶಾಂತ್ ಶರ್ಮಾ ಹೇಳಿದರು.