ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಲಿ ಎಂದ ಆರ್ ಜೆಡಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿರುವ ಜೆಡಿ(ಯು) ನಾಯಕರ ಕೋರಸ್‌ಗೆ ಈಗ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಸಹ ಸೇರಿದೆ.
Published: 29th September 2023 09:02 PM | Last Updated: 30th September 2023 05:42 PM | A+A A-

ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿರುವ ಜೆಡಿ(ಯು) ನಾಯಕರ ಕೋರಸ್‌ಗೆ ಈಗ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಸಹ ಸೇರಿದೆ.
ಆರ್‌ಜೆಡಿ ಹಿರಿಯ ನಾಯಕ ಮತ್ತು ಪಕ್ಷದ ಶಾಸಕ ಭಾಯಿ ವೀರೇಂದ್ರ ಅವರು, ನಿತೀಶ್ ಕುಮಾರ್ ಅತ್ಯಂತ ಅರ್ಹ ಪ್ರಧಾನಿ ಅಭ್ಯರ್ಥಿಯಾಗಿದ್ದು, ಬಿಹಾರದ ಜನತೆ ಅವರನ್ನು ಪ್ರಧಾನಿ ಹುದ್ದೆಯಲ್ಲಿ ನೋಡಲು ಬಯಸುತ್ತಾರೆ ಎಂದು ಶುಕ್ರವಾರ ಹೇಳಿದ್ದಾರೆ.
ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಮಾತನಾಡಿ, ದೇಶದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಬಿಹಾರದವರಾಗಿದ್ದು, ಈಗ ಜನ ಮುಂದಿನ ಪ್ರಧಾನಿ ರಾಜ್ಯದವರೇ ಆಗಬೇಕೆಂದು ಬಯಸಿದ್ದಾರೆ ಎಂದಿದ್ದಾರೆ.
ಇಂದು ಪಾಟ್ನಾದ ಫುಲ್ವಾರಿಶರೀಫ್‌ನಲ್ಲಿರುವ ದರ್ಗಾವೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಸ್ಲಿಂ ಧರ್ಮಗುರು ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿದ ಘಟನೆಯನ್ನು ಉಲ್ಲೇಖಿಸಿದ ತಿವಾರಿ, "ಅವರಿಗೆ ಎಲ್ಲಾ ಧರ್ಮಗಳ ಬಗ್ಗೆ ಗೌರವವಿದೆ" ಎಂದು ಹೇಳಿದರು.
ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ನಿತೀಶ್ ಕುಮಾರ್ ಅವರಿಗಿಂತ ಸಮರ್ಥರು ಯಾರೂ ಇಲ್ಲ: ಮಹೇಶ್ವರ್ ಹಜಾರಿ
ಇತ್ತೀಚೆಗಷ್ಟೇ, ಜೆಡಿಯು ಹಿರಿಯ ನಾಯಕ ಮತ್ತು ಬಿಹಾರ ವಿಧಾನಸಭೆ ಉಪ ಸ್ಪೀಕರ್ ಮಹೇಶ್ವರ್ ಹಜಾರಿ ಅವರು, "ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಿ ಹುದ್ದೆಗೆ ಅತ್ಯಂತ ಅರ್ಹ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಿದಾಗ ಅದು ನಿತೀಶ್ ಅವರ ಹೆಸರಾಗಿರುತ್ತದೆ ಎಂದಿದ್ದರು".
ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಮತ್ತು ಹಿರಿಯ ಜೆಡಿಯು ಸಚಿವ ಲೇಶಿ ಸಿಂಗ್ ಕೂಡ ನಿತೀಶ್ ದೇಶವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.