ಛತ್ತೀಸ್‌ಗಢ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಧಾನಿ ಮೋದಿ

ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಯೋಜನೆಯಲ್ಲೂ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಬಿಲಾಸ್‌ಪುರ: ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಯೋಜನೆಯಲ್ಲೂ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದಲಿತರು, ಎಸ್ಟಿಗಳು ಮತ್ತು ಒಬಿಸಿಗಳ ಬೆಳವಣಿಗೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ತಮ್ಮನ್ನು ಗುರಿಯಾಗಿಸುವ ನೆಪದಲ್ಲಿ ಕಾಂಗ್ರೆಸ್ ಒಬಿಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲೋಕಸೇವಾ ಆಯೋಗದ ಹಗರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಪಿಎಂ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ನೀಡಲಾದ ಪಡಿತರ ವಿತರಣೆಯಲ್ಲಿ ಮತ್ತು ತನ್ನದೇ ಆದ ಹಸುವಿನ ಸಗಣಿ ಖರೀದಿ ಯೋಜನೆಯಲ್ಲಿಯೂ ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ, ಮನೆ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಮೂಲಕ ಪ್ರತಿಯೊಬ್ಬ ಬಡವರಿಗೂ ಮನೆಗಳನ್ನು ನೀಡಲಾಗುವುದು ಮತ್ತು ಈ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೋದಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com